ಮಡಿಕೇರಿ, ಜು. ೧೧: ಮರಗೋಡು ಶಿವ ಪಾರ್ವತಿ ದೇವಾಲಯದಲ್ಲಿ ಶ್ರೀ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮ ದೇವಾಲಯದ ಮುಖ್ಯ ಅರ್ಚಕ ಅಮಿತ್ ಹಾಗೂ ದೇವಾಲಯ ಸಮಿತಿಯ ಮುಖ್ಯಸ್ಥ ತಾತಪಂಡ ಉತ್ತಪ್ಪ ನೇತೃತ್ವದಲ್ಲಿ ನಡೆಯಿತು.
ದೇವಾಲಯದ ತಕ್ಕಮುಖ್ಯಸ್ಥರು ಹಾಗೂ ಆಡಳಿತ ಮಂಡಳಿ, ಭಕ್ತಾದಿಗಳು ಮತ್ತು ಗ್ರಾಮಸ್ಥರು ಸೇರಿದ್ದರು. ಮಧ್ಯಾಹ್ನದ ಅನ್ನದಾನದ ವ್ಯವಸ್ಥೆಯನ್ನು ದಾನಿಗಳು ಹಾಗೂ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಏರ್ಪಡಿಸಲಾಗಿತ್ತು.