ಸೋಮವಾರಪೇಟೆ, ಜು. ೧೧: ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ವಹಿಸಿದ್ದರು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಯ ಜಿಲ್ಲಾ ಎಂಟಮಾಲಜಿಸ್ಟ್ ಮಂಜುನಾಥ್ ಅವರು ಮಾತನಾಡಿ, ಡೆಂಗ್ಯೂ ಹಾಗೂ ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆಹಚ್ಚಿ ಸಂಪೂರ್ಣವಾದ ಚಿಕಿತ್ಸೆಯಿಂದ ಗುಣಪಡಿಸಬಹುದು ಎಂದರು.

ಡೆAಗ್ಯೂ, ಮಲೇರಿಯಾ ಜ್ವರದ ಲಕ್ಷಣಗಳು ಹಾಗೂ ಚಿಕಿತ್ಸಾ ವಿಧಾನ, ಸೊಳ್ಳೆಗಳ ಉತ್ಪತ್ತಿ ಹಾಗೂ ಜೀವನ ಕ್ರಮ, ಚಿಕುನ್ ಗುನ್ಯಾ ಜ್ವರದ ಚಿಕಿತ್ಸಾ ವಿಧಾನಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.

ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಅವರು ಮಾತನಾಡಿ, ರಾಷ್ಟಿçÃಯ ಕ್ಷಯರೋಗ ನಿರ್ಮೂಲನೆ, ರಾಷ್ಟಿçÃಯ ಕುಷ್ಠರೋಗ ನಿರ್ಮೂಲನೆ, ವಿಶ್ವ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮದ ಬಗ್ಗೆ ಮಾಹಿತಿ ಒದಗಿಸಿದರು.

ಪರಿಸರ, ನೀರಿನ ಸ್ವಚ್ಛತೆಯಿಂದ ಹಲವಷ್ಟು ರೋಗಗಳನ್ನು ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಾಗ್ರತೆ ವಹಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರದ ಸಹಾಯಕಿಯರು, ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.