ಕೂಡಿಗೆ, ಜು. ೧೧: ಕೂಡು ಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಶಿಕ್ಷಕಿ ಎ. ಬೋಜಮ್ಮ ಅವರನ್ನು ಶಾಲೆಯ ಸಿಬ್ಬಂದಿ ಹಾಗೂ ಎಸ್.ಡಿ.ಎಂ.ಸಿ. ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಕೂಡಿಗೆ ಕ್ಲಸ್ಟರ್ನ ಸಿ.ಆರ್.ಪಿ. ಕೆ. ಶಾಂತಕುಮಾರ್ ಮಾತನಾಡಿ, ಶಿಕ್ಷಕಿ ಬೋಜಮ್ಮ ಅವರು ಶಾಲೆಗೆ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದು, ಶಾಲೆಯಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಗಿದೆ ಎಂದರು. ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಕರು ಉತ್ತಮ ಸೇವೆ ಸಲ್ಲಿಸಿದಾಗ ಸಮಾಜವು ಶಿಕ್ಷಕರ ಬಗ್ಗೆ ಹೆಮ್ಮೆಪಡುತ್ತದೆ. ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯ ಎಂದರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪೂಜಾ, ಅರ್ಪಿತ, ಹರೀಶ್, ಶಾಹಿನ, ಮಂಜುನಾಥ್, ಸಂಪಾಜೆಯ ಪೆರುಮುಂಡ ಮನು, ಪ್ರಸಾದ್ ಪೂಜಾರಿ, ನಿವೃತ್ತ ದÊಹಿಕ ಶಿಕ್ಷಣ ಶಿಕ್ಷಕ ಡಿ.ವಿ. ಗಣೇಶ್, ಪ್ರಾಥಮಿಕ ಶಾಲೆಯ ಹಾಗೂ ಪ್ರೌಢಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.