ಮಡಿಕೇರಿ, ಜು. ೧೮: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ೨೦೨೪-೨೫ನೇ ಸಾಲಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ತಾ. ೧೯ ಇಂದು ಸಂಜೆ ೪ ಗಂಟೆಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಘಟಿಕೋತ್ಸವ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅರುಣ್ ಕುಮಾರ್ ತಿಳಿಸಿದ್ದಾರೆ.