ಮಡಿಕೇರಿ, ಜು. ೧೯: ಕೊಡಗು ವೃತ್ತ ವ್ಯಾಪ್ತಿಯಲ್ಲಿ ಗಸ್ತು ಅರಣ್ಯ ಪಾಲಕರ ಹುದ್ದೆಯ ನೇರ ನೇಮಕಾತಿ ಪರೀಕ್ಷೆಯು ತಾ. ೨೦ ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ. ಪರೀಕ್ಷೆ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ೨೦೨೩ರ ಕಲಂ ೧೬೩ ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರವಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನದಂದು ಪರೀಕ್ಷಾ ಪ್ರಾರಂಭದ ಒಂದು ಗಂಟೆ ಮುಂಚಿತದಿAದ ಪರೀಕ್ಷೆ ಮುಕ್ತಾಯವಾಗುವವರೆಗೆ ಮುಚ್ಚತಕ್ಕದ್ದು ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಆದೇಶ ಹೊರಡಿಸಿದ್ದಾರೆ.