ವೀರಾಜಪೇಟೆ, ಜು. ೧೯: ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮದ ದೇವಣಗೇರಿಯಲ್ಲಿ ರೂ. ೧೦ ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ನೂತನ ರಸ್ತೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು.

ಉದ್ಘಾಟನೆ ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಜನಸಾಮಾನ್ಯರಿಗೆ ರಸ್ತೆ ಸಂಪರ್ಕ ಮೂಲಭೂತ ಬೇಡಿಕೆಯಾಗಿದ್ದು, ತನ್ನ ಅಧಿಕಾರ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುವುದಾಗಿ ಹೇಳಿದರು.

ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ದೇವಣಗೇರಿ ವಲಯ ಅಧ್ಯಕ್ಷ ಐಚಂಡ ಕರ್ಣ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್, ಅಬ್ದುಲ್ಲ ಹಾಜಿ, ಉಸ್ಮಾನ್, ಪಂಚಾಯಿತಿ ಸದಸ್ಯ ಆಸ್ಫಕ್, ಪಕ್ಷದ ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.ವೀರಾಜಪೇಟೆ: ಕೊಂಡAಗೇರಿ ಹಾಲುಗುಂದ ಗ್ರಾಮ ವ್ಯಾಪ್ತಿಯ ಅತ್ತಪಟ್ಟಿ ಅಂಗನವಾಡಿಯಿAದ ಕೇತುಮೊಟ್ಟೆ ಮುಸ್ಲಿಂ ಕಾಲೋನಿವರೆಗಿನ ನೂತನ ರಸ್ತೆ ಹಾಗೂ ಸೇತುವೆಯನ್ನು, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಉದ್ಘಾಟಿಸಿದರು.

ಈ ಪ್ರತ್ಯೇಕ ಕಾಮಗಾರಿಗಳು ತಲಾ ರೂ. ೧೫ಲಕ್ಷ ವೆಚ್ಚದಲ್ಲಿ ನಡೆದಿದ್ದು, ರಸ್ತೆ ಹಾಗೂ ಸೇತುವೆ ಉದ್ಘಾಟನೆ ಬಳಿಕ ಮಾತನಾಡಿದ ಶಾಸಕರು, ಗುಣಮಟ್ಟದ ಕಾಮಗಾರಿ ಇದಾಗಿದ್ದು ಮುಂದಿನ ದಿನಗಳಲ್ಲಿ ಮಳೆಗಾಲ ಹಾಗೂ ಇನ್ನಿತರ ಸಮಯಗಳಲ್ಲಿ ಈ ಭಾಗದಲ್ಲಿ ಸಂಚರಿಸುವ ಜನರಿಗೆ ಇದರಿಂದ ಅನುಕೂಲವಾಗಿ ಎಂದರು.

ಈ ಸಂದರ್ಭ ಹಾಲುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರಹಮಾನ್ ಅಂದಾಯಿ, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷ ರಫೀಕ್, ವಲಯ ಅಧ್ಯಕ್ಷ ಅಬ್ದುಲ್ಲ, ಹಾಲುಗುಂದ ವಲಯ ಅಧ್ಯಕ್ಷ ಚೀಲು, ಲಕ್ಷ÷್ಮಣ, ಕುಶು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಚೆಯ್ಯಂಡಾಣೆ : ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮಿಯಾಲದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣವಾದ ರಸ್ತೆಯನ್ನು ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹಾಗೂ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಉದ್ಘಾಟಿಸಿದರು. ರೂ. ೧೦ ಲಕ್ಷ ವೆಚ್ಚದಲ್ಲಿ ನಡೆದ ಕಾಮಗಾರಿಯ ಗುಣಮಟ್ಟವನ್ನು ಪರೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭ ವಲಯಾಧ್ಯಕ್ಷರಾದ ಕಾಳಮಂಡ ಬೇಬಿ, ಗ್ರಾಮ ಪಂಚಾಯಿತಿ ಸದಸ್ಯರಾದ ಅಶ್ಪಾಕ್, ಮಾಜಿ ಸದಸ್ಯರಾದ ಹನೀಫ್, ಕುಂದಚೀರ ಮಂಜು ದೇವಯ್ಯ, ಪಕ್ಷದ ಪ್ರಮುಖರು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.