ಮಡಿಕೇರಿ, ಜು. ೨೨: ಮೈಸೂರು ಧರ್ಮಕ್ಷೇತ್ರ ಶಿಕ್ಷಣ ಸಂಸ್ಥೆ (ಎಂ.ಡಿ.ಇ.ಎಸ್.) ವಜ್ರ ಮಹೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ ಈ ವರ್ಷವನ್ನು ‘ಹಸಿರು ಆವರಣ - ಸ್ವಚ್ಛ ಆವರಣ’ ಎಂಬ ಧ್ಯೇಯವಾಕ್ಯದೊಂದಿಗೆ ಆಡಳಿತ ಮಂಡಳಿಯ ಅಧೀನದಲ್ಲಿರುವ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ ಆಚರಿಸಲು ಕರೆ ನೀಡಿರುವ ಪ್ರಯುಕ್ತ ಸಂತ ಮೈಕಲರ ವಿದ್ಯಾಸಂಸ್ಥೆಯಲ್ಲಿ ಹಸಿರು ಆವರಣ ಸ್ವಚ್ಛ ಆವರಣ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಸಂತ ಮೈಕಲರ ವಿದ್ಯಾಸಂಸ್ಥೆಯ ಸಂಚಾಲಕ ಫಾ. ಸಂಜಯ್‌ಕುಮಾರ್ ಎಫ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕುಶಾಲನಗರ ಕೂಡುಮಂಗಳೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮ್‌ಕುಮಾರ್ ಆಗಮಿಸಿದ್ದರು.

ಪರಿಸರ ಜಾಗೃತಿ ಮೂಡಿಸುವಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವ ಪ್ರೇಮ್‌ಕುಮಾರ್ ಅವರು ಮಾತನಾಡಿ, ಪರಿಸರ ಮಾಲಿನ್ಯ ಮುಕ್ತಗೊಳಿಸಲು, ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದೂ, ಹಸಿರು ಪಟಾಕಿ ಬಳಸುವುದು, ಜೇಡಿ ಮಣ್ಣಿನ ಗೌರಿ ಗಣೇಶ ಮೂರ್ತಿಗಳನ್ನು ನಿರ್ಮಿಸುವುದು, ಪ್ಲಾಸ್ಟಿಕ್ ಮುಕ್ತ ಅಭಿಯಾನ, ಪರಿಸರ ಜಾಥಾ ನಡೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜೀವ ವೈವಿಧ್ಯತೆಯನ್ನು ಕಾಪಾಡುವುದು, ಕಾವೇರಿಯನ್ನು ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು. ಇದಕ್ಕೆ ಸಂಬAಧಿಸಿದAತೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಸಂಚಾಲಕ ಫಾ. ಸಂಜಯ್‌ಕುಮಾರ್ ಎಫ್. ಅವರು ಮಾತನಾಡಿ, ಪರಿಸರ ಹಸಿರಿದ್ದಲ್ಲಿ ಮನಸ್ಸು ಆರೋಗ್ಯಕರವಾಗಿರುತ್ತದೆ. ಹಸಿರು ಗಿಡ ನೋಡಿದರೆ ಸಂತೋಷವಾಗುವುದಲ್ಲದೆ ಬೋಧನಾ ಕಾರ್ಯಗಳಿಗೂ ಮನಸ್ಸು ಉಲ್ಲಾಸಗೊಳ್ಳುತ್ತದೆ. ಆಮ್ಲಜನಕ ಹೆಚ್ಚು ಉತ್ಪಾದಿಸುವ ಸಸ್ಯಗಳನ್ನು ಹಾಗೂ ಔಷಧೀಯ ಸಸ್ಯಗಳನ್ನು ಹೆಚ್ಚಾಗಿ ನೆಡುವುದರ ಮೂಲಕ ಆವರಣವನ್ನು ಹಸಿರಾಗಿಸುವುದಲ್ಲಿದೆ, ನಮ್ಮ ಆರೋಗ್ಯವನ್ನು ಹಸನಾಗಿಡಬಹುದು. ಈ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು ಒಂದೊAದು ಗಿಡಗಳನ್ನು ನೆಟ್ಟು ಪರಿಸರವನ್ನು ಸ್ವಚ್ಛಗೊಳಿಸುವತ್ತ ಪ್ರಯತ್ನಿಸುವಂತೆ ಕರೆ ನೀಡಿದರು.

ವಿದ್ಯಾರ್ಥಿ ಗಳಿಂದ ಪರಿಸರ ಜಾಗೃತಿ ಮೂಡಿಸುವ ನೃತ್ಯವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜು ವಿಭಾಗದ ಪ್ರಾಂಶುಪಾಲೆ ಪಂಕಜಾ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಜೆಫ್ರಿ ಡಿಸಿಲ್ವಾ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥರಾದ ಸಿಸ್ಟರ್ ಸರಿತ ಮೂಡ್ತ, ಸಿಸ್ಟರ್ ಸಿಸಿಲಿಯಾ ಹಾಜರಿದ್ದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ಜೆಫ್ರಿ ಡಿಸಿಲ್ವಾ ಸ್ವಾಗತಿಸಿದರೆ, ಶಿಕ್ಷಕಿ ರೀಟಾ ವಂದಿಸಿದರು. ಡಾ. ಸವರಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.