ಕುಶಾಲನಗರ, ಜು. ೨೨: ಕುಶಾಲನಗರದಲ್ಲಿ ಹೊಸ ಗೃಹ ಮಂಡಳಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಬಡಾವಣೆಯಲ್ಲಿ ನಡೆದ ಕಾರ್ಯಕ್ರಮವನ್ನು ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷಿö್ಮ ಚಂದ್ರ ಉದ್ಘಾಟಿಸಿದರು. ಪುರಸಭೆಯ ವಾರ್ಡ್ ಸದಸ್ಯ ಎಂ.ಕೆ. ದಿನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೂತನ ಸಂಘದ ಕಟ್ಟಡ ನಿರ್ಮಾಣಕ್ಕೆ ಸಿಎ ಸೈಟ್‌ಗೆ ನಿವಾಸಿಗಳ ಬೇಡಿಕೆಗೆ ಸ್ಪಂದಿಸಿದ ಅವರು, ಸಿಎ ಸೈಟ್ ಹೊರತುಪಡಿಸಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ವೊಂದನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಬಡಾವಣೆಯಲ್ಲಿ ಸುಸಜ್ಜಿತ ಪಾರ್ಕ್ ನಿರ್ಮಾಣ, ಬೋರ್ಡ್ ಅಳವಡಿಕೆ, ವಾಕಿಂಗ್ ಪಾಥ್ ನಿರ್ಮಾಣ, ರಸ್ತೆ ಅಭಿವೃದ್ಧಿ, ಕಾಡು ಗಿಡಗಳ ತೆರವು, ಖಾಲಿ ಸೈಟ್ ಸ್ವಚ್ಛತೆ, ರಾತ್ರಿ ಪೊಲೀಸ್ ಬೀಟ್ ವ್ಯವಸ್ಥೆ ಮತ್ತಿತರರ ಬೇಡಿಕೆ ಒಳಗೊಂಡ ಮನವಿಯನ್ನು ಜನಪ್ರತಿನಿಧಿಗಳಿಗೆ ಸಲ್ಲಿಸಲಾಯಿತು.

ಸಂಘದ ಉಪಾಧ್ಯಕ್ಷ ಎನ್. ಕೃಷ್ಣಮೂರ್ತಿ, ಕಾರ್ಯದರ್ಶಿ ಪಿ.ಎ. ಉತ್ತಪ್ಪ, ಜಂಟಿ ಕಾರ್ಯದರ್ಶಿ ಚಂದ್ರಶೇಖರ್ ಬಡಾವಣೆ ನಿವಾಸಿಗಳು ಇದ್ದರು.