ಕೂಡಿಗೆ, ಜು. ೨೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮ ವ್ಯಾಪ್ತಿಯ ಶಿರಹೂಳಲು, ಹುದುಗೂರು, ಗ್ರಾಮಗಳ ಶೀತ ಪೀಡಿತ ಗ್ರಾಮಗಳ ಗ್ರಾಮಸ್ಥರ ಸಮ್ಮುಖದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನವರ ಅಧ್ಯಕ್ಷತೆಯಲ್ಲಿ ಹುದುಗೂರು ಕ್ರೀಡಾ ಸಭಾಂಗಣದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಹಾರಂಗಿ ನಾಲೆಗಳ ಹಾಗೂ ಉಪ ನಾಲೆಗಳ ದುರಸ್ತಿಗೆ ಸಂಬAಧಿಸಿದ ಚರ್ಚೆಗಳು, ಅಚ್ಚುಕಟ್ಟು ಪ್ರದೇಶದ ನೀರಿನ ಸದ್ಭಳಕೆ ಬಗ್ಗೆ ಗ್ರಾಮಸ್ಥರ ಸಮ್ಮುಖದಲ್ಲಿ ಚರ್ಚೆಗಳು ನಡೆದವು.
ಸಭೆಯಲ್ಲಿ ಹಾಜರಿದ್ದ ಹುದುಗೂರು ವ್ಯಾಪ್ತಿಯ ಗ್ರಾಮಸ್ಥರು ಗ್ರಾಮದ ಸಮಸ್ಯೆಗಳನ್ನು ಶಾಸಕರ ಮುಂದೆ ಸವಿಸ್ತಾರವಾಗಿ ತಿಳಿಸಿದರು, ಕಾಡಾನೆಗಳ ಹಾವಳಿ, ರಸ್ತೆಯ ದುರಸ್ತಿ, ಗೋ ಸದನದ ವಿಷಯ, ಹುದುಗೂರು ಗ್ರಾಮದಲ್ಲಿರುವ ಪಶುವೈದ್ಯ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಚರ್ಚೆಗಳು ನಡೆದವು.
ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ನಾಲೆಗಳ ಅಭಿವೃದ್ಧಿಗೆ ಈಗಾಗಲೇ ಕ್ರಿಯಾ ಯೋಜನೆ ಅನುಗುಣವಾಗಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮ ವ್ಯಾಪ್ತಿಯ ಸಮಸ್ಯೆಗಳನ್ನು ಹಂತ ಹಂತವಾಗಿ ಕೈಗೊಳ್ಳುವ ಮೂಲಕ ಬಗೆಹರಿಸಲು ಪ್ರಯತ್ನ ಮಾಡಲಾಗುವುದು. ಮಾವಿನಹಳ್ಳ ವ್ಯಾಪ್ತಿಯ ಗ್ರಾಮಸ್ಥರ ಸಮಸ್ಯೆಯನ್ನು ವಿಶೇಷ ಸಭೆಯನ್ನು ಕರೆದು ಬಗೆಹರಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ನೀರಾವರಿ ಸಲಹಾ ಸಮಿತಿ ಸದಸ್ಯರಾದ ಟಿ.ಕೆ. ಪಾಂಡುರAಗ, ಉಮಾ ಪ್ರಭಾಕರ್, ಸುಬ್ಬಣ್ಣ, ಮುಸ್ತಫಾ, ಗೋಪಾಲಕೃಷ್ಣ, ಕಾವೇರಿ ನೀರಾವರಿ ನಿಗಮದ ಹಾರಂಗಿ ವೃತ್ತದ ಅಧೀಕ್ಷಕ ಅಭಿಯಂತರ ಸತೀಶ್, ಕಾರ್ಯಪಾಲಕ ಅಭಿಯಂತರ ಐ. ಕೆ. ಪುಟ್ಟಸ್ವಾಮಿ ಮಹಾಮಂಡಲದ ಅಧ್ಯಕ್ಷ ಚೌಡೇಗೌಡ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಪ್ರೇಮಲೀಲಾ, ನೀರು ಬಳಕೆದಾರ ಸಂಘದ ಮಾಜಿ ಅಧ್ಯಕ್ಷ ಐ. ಎಸ್ ಗಣೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್, ಪ್ರಮುಖರಾದ ಮಂಜುನಾಥ, ಪ್ರಕಾಶ್, ಶರತ್, ಖಾದರ್, ರವಿ, ಇಂಜಿನಿಯರ್ ಸೌಮ್ಯ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.