ಕರಿಕೆ, ಜು. ೨೩: ಕರಿಕೆ ಗ್ರಾ.ಪಂ.ಯ ೨೦೨೪-೨೫ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆ ಹಾಗೂ ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯನ್ನು ಗ್ರಾ.ಪಂ. ಅಧ್ಯಕ್ಷ ಬಾಲಚಂದ್ರನ್ ನಾಯರ್ ಎನ್. ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿಯಾದ ಸ.ಹಿ.ವ. ವಿಸ್ತರಣಾ ಅಧಿಕಾರಿ ಮೋಹನ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸುಂದರೇಶ್ ಅವರ ಉಪಸ್ಥಿತಿಯಲ್ಲಿ ಗ್ರಾ.ಪಂ. ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷರು, ಸದಸ್ಯರು, ತಾಂತ್ರಿಕ ಸಹಾಯಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯವರು, ಸಿಬ್ಬಂದಿ ವರ್ಗ ಹಾಜರಿದ್ದರು.