ಸೋಮವಾರಪೇಟೆ, ಜು. ೨೩: ಕೊಡಗು ಛಾಯಾ ಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ತಾಲೂಕು ಘಟಕದ ಆಶ್ರಯದಲ್ಲಿ ಪಟ್ಟಣದ ಜಾನಕಿ ಕನ್ವೆನ್‌ಷನ್ ಸಭಾಂಗಣದಲ್ಲಿ ಫೋಟೋಶಾಪ್, ವೀಡಿಯೋ ಎಡಿಟಿಂಗ್ ಮತ್ತು ಫೋಟೋಗ್ರಫಿಯಲ್ಲಿ ಎ.ಐ. ಬಳಕೆ ಬಗ್ಗೆ ವೃತ್ತಿ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರವನ್ನು ಕೊಡಗು ಜಿಲ್ಲಾ ಬಿ.ಜೆ.ಪಿ. ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಶ್ರೀ ವಿನಯ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್. ಮಹದೇವಪ್ಪ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಭಿನಂದನ್, ಪ್ರವೀಣ್, ವಿಜಯ್ ಅವರುಗಳು ಛಾಯಾಗ್ರಾಹಕ ವೃತ್ತಿಯಲ್ಲಿ ಎ.ಐ. ತಂತ್ರಜ್ಞಾನವನ್ನು ಬಳಸಿಕೊಳ್ಳುವ ಬಗ್ಗೆ ತರಬೇತಿ ನೀಡಿದರು.
ಕರ್ನಾಟಕ ರಾಜ್ಯ ಛಾಯಾಗ್ರಾಹಕರ ಸಂಘದ ನಿರ್ದೇಶಕ ದೀಪಕ್, ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ನಿಕಟಪೂರ್ವ ಅಧ್ಯಕ್ಷ ವಸಂತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲವಕುಮಾರ್, ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಪ್ರಧಾನ ಕಾರ್ಯದರ್ಶಿ ಅಭಿ, ಖಜಾಂಚಿ ಅರುಣ್, ದಕ್ಷಿಣ ಕೊಡಗು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರವೀಂದ್ರ, ಪ್ರೊಫೆಷನಲ್ ಫೋಟೋಗ್ರಾಫರ್ ಸಂಘದ ಅಧ್ಯಕ್ಷ ಅಂತೋಣಿ ಜೋಬಿ, ಮಂಜಿನನಗರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಪ್ರದೀಪ್ ಮರಗೋಡು, ಶ್ರೀ ಕಾವೇರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿಜಯಕುಮಾರ್, ಕಾರ್ಮಿಕ ಇಲಾಖೆಯ ವಾಣಿ ಅವರುಗಳು ಉಪಸ್ಥಿತರಿದ್ದರು.
ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಡೇವಿಡ್, ಮಾಜಿ ಜಿಲ್ಲಾ ಉಪಾಧ್ಯಕ್ಷ ಜನಾರ್ಧನ್, ನಾಸಿರ್ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.