ವೀರಾಜಪೇಟೆ, ಜು. ೨೩: ಕರ್ನಾಟಕ ರಾಜ್ಯ ಸರಕಾರದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮುಖಾಂತರ ಅರ್ಹ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್‌ಗಳನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಗೃಹ ಕಚೇರಿಯಲ್ಲಿ ವಿತರಿಸಿದರು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಗ್ರಾಮಗಳ ಮಡಿಕೇರಿಯಲ್ಲಿ ನೋಂದಣಿಯಾದ ೮ ಜನ ವೆಲ್ಡಿಂಗ್ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸೋಮವಾರಪೇಟೆ ಹಾಗೂ ವೀರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಶಶಿಧರ್ ಎಸ್. ವೀರಾಜಪೇಟೆ ಹಾಗೂ ಮಡಿಕೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯ ಸಿಬ್ಬಂದಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪೂನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವೀರಾಜಪೇಟೆ ವಿಧಾನ ಸಭೆ ಕ್ಷೇತ್ರದ ಯುವ ಘಟಕದ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಕಾಂಗ್ರೆಸ್ ಮುಖಂಡರಾದ ಜೋಕಿಮ್, ತೆನ್ನಿರಾ ಮೈನಾ, ಮಹಾದೇವ, ಮಂಜುನಾಥ್ ಉಪಸ್ಥಿತರಿದ್ದರು.