ಸೋಮವಾರಪೇಟೆ, ಜು. ೩೦: ಸಮೀಪದ ಬೇಳೂರು ಗ್ರಾಮ ಪಂಚಾಯಿತಿಯಲ್ಲಿ ರೂ. ೧೨ ಲಕ್ಷಕ್ಕೂ ಅಧಿಕ ಹಣ ದುರುಪಯೋಗವಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬೇಳೂರು ಗ್ರಾ.ಪಂ. ವ್ಯಾಪ್ತಿಯ ಸಾರ್ವಜನಿಕರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಬೇಳೂರು ಗ್ರಾಮ ಪಂಚಾಯಿತಿಯ ಬಜೆಗುಂಡಿ ಗ್ರಾಮದ ನೀರು ಮತ್ತು ನೈರ್ಮಲ್ಯ ಖಾತೆಯಿಂದ ರೂ. ೧೨ ಲಕ್ಷಕ್ಕೂ ಅಧಿಕ ಹಣ ದುರುಪಯೋಗವಾಗಿದೆ. ಈ ಹಣಕ್ಕೆ ಆಡಿಟ್‌ನಲ್ಲೂ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ ಎಂದು ಲೆಕ್ಕಪರಿಶೋಧಕರು ತಿಳಿಸಿದ್ದಾರೆ. ಸಂಬAಧಿಸಿದ ಖಾತೆಗೆ ಕೆಲವು ಎಲೆಕ್ಟಾçನಿಕ್ಸ್ ಅಂಗಡಿಯವರು ಸುಮಾರು ೯ ಲಕ್ಷದಷ್ಟು ಹಣವನ್ನು ವಾಪಸ್ ಹಾಕಿದ್ದಾರೆ. ಒಟ್ಟಾರೆ ಪಂಚಾಯಿತಿಯ ಅಂದಿನ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಹಣ ದುರುಪಯೋಗದಲ್ಲಿ ಭಾಗಿಯಾಗಿದ್ದು, ಇವರುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂದರ್ಭ ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎ. ಯಾಕೂಬ್, ಕುಮಾರ್, ಅಬ್ದುಲ್ ರಜಾಕ್, ಆನಂದ್ ಅವರುಗಳು ಇದ್ದರು.