ಮಡಿಕೇರಿ ಜು. ೩೦: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ೩೦ನೇ ವರ್ಷದ ಕಕ್ಕಡ-೧೮ ಆಚರಣೆ ಆ.೨ ರಂದು ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್ನಲ್ಲಿ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್. ಯು. ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯುವ ಕಾರ್ಯಕ್ರಮದ ಆರಂಭದಲ್ಲಿ ಕೊಡವ ಗುರುಕಾರೋಣರನ್ನು ಸ್ಮರಿಸಿ ಪ್ರಾರ್ಥಿಸಲಾಗುವುದು ಮತ್ತು ಕಕ್ಕಡ-೧೮ರ ವಿಶೇಷ ಖಾದ್ಯಗಳನ್ನು ಅರ್ಪಿಸಲಾಗುವುದು. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಆದಿಮಸಂಜಾತ ಕೊಡವರು ಆರಾಧಿಸುವ ಪ್ರಕೃತಿಸಿರಿಯ ಕೊಡವ ಮಾತೃಭೂಮಿಯನ್ನು ಉಳಿಸಿಕೊಳ್ಳುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸ ಲಾಗುವುದು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಸ್ವಯಂ ಆಡಳಿತ ನೀಡಬೇಕು, ಆದಿಮಸಂಜಾತ ಕೊಡವರಿಗೆ ಎಸ್ಟಿ ಟ್ಯಾಗ್ ಘೋಷಿಸಬೇಕು, ಆರ್ಟಿಕಲ್ ೩೭೧, ೨೪೪ನೇ ವಿಧಿ ಮತ್ತು ೬ ಮತ್ತು ೮ನೇ ಶೆಡ್ಯೂಲ್ ಪ್ರಕಾರ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕು ಒದಗಿಸಬೇಕು, ಆದಿಮಸಂಜಾತ ಏಕ ಜನಾಂಗೀಯ ಕೊಡವರ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿಸಬೇಕು, ಕೊಡವರು, ಅವರ ಪಾರಂಪರಿಕ ಭೂಮಿ, ಭಾಷೆ, ಪರಿಸರ, ಜಲಸಂಪನ್ಮೂಲ, ಜಾನಪದ ಪರಂಪರೆ, ರಾಜಕೀಯ ಅಸ್ಮಿತೆ ಮತ್ತು ಐತಿಹಾಸಿಕ ನಿರಂತರತೆ, ಸಾಂಪ್ರದಾಯಿಕ ಆವಾಸಸ್ಥಾನÀಗಳನ್ನು ಗುರುತಿಸಬೇಕು ಮತ್ತು ರಾಜ್ಯಾಂಗ ಖಾತ್ರಿ ನೀಡಬೇಕು.
ಆದಿಮಸಂಜಾತ ಜನಾಂಗಗಳ ಹಕ್ಕುಗಳ ಸಂರಕ್ಷಣೆಗಾಗಿ ವಿಶ್ವ ರಾಷ್ಟç ಸಂಸ್ಥೆ ಯುಎನ್ಓ ಒಡಂಬಡಿಕೆಯAತೆ ಅಂತರರಾಷ್ಟಿçÃಯ ಕಾನೂನಿನಡಿಯಲ್ಲಿ ಕೊಡವರ ಹಕ್ಕುಗಳನ್ನು ಘೋಷಿಸಬೇಕು ಮತ್ತು ಪೋಷಿಸಬೇಕು ಎಂದು ಹಕ್ಕೊತ್ತಾಯ ಮಂಡಿಸುವುದಾಗಿ ಎನ್. ಯು. ನಾಚಪ್ಪ ತಿಳಿಸಿದ್ದಾರೆ.