ಕೂಡಿಗೆ, ಆ. ೮ : ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ಕುಶಾಲನಗರ ತಾಲೂಕು ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ವರದಿಯನ್ನು ಓದುವ ಮೂಲಕ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳ ಜೊತೆಯಲ್ಲಿ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮಖರಾಗಿರುತ್ತಾರೆ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು.

ನಂತರ ಯುವ ಶಕ್ತಿಯ ಯೋಜನೆಯು ಸಂಪೂರ್ಣವಾಗಿ ತಾಲೂಕಿನಲ್ಲಿ ಕಾರ್ಯಗತಗೊಳಿಸಲು ಮತ್ತು ಯುವಕರಿಗೆ ಸಮರ್ಪಕವಾಗಿ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಸಂಬAಧಿಸಿದ ಇಲಾಖೆಯರು ಯುವ ಮೇಳವನ್ನು ಮುಂದಿನ ದಿನಗಳಲ್ಲಿ ಆಯೋಜಿಸುವಂತೆ ಅಧ್ಯಕ್ಷ ಶಶಿಧರ್ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ವಿತರಣೆಯಾದ ಪಡಿತರ ವಸ್ತುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಖರೀದಿಸುತ್ತಿದ್ದ ಸಂದರ್ಭದಲ್ಲಿ ಪಡಿತರ ವಸ್ತುಗಳನ್ನು ವಶ ಪಡೆದುಕೊಂಡು ಕಾನೂನು ಕ್ರಮ ತೆಗೆದುಕೊಂಡ ಆಹಾರ ಇಲಾಖೆಯ ತಾಲೂಕು ಅಹಾರ ಪರಿವೀಕ್ಷಣಾ ಅಧಿಕಾರಿ ಸ್ವಾತಿ ಅವರ ಕಾರ್ಯ ವೈಖರಿಯನ್ನು ಗುರುತಿಸಿ ಸಭೆಯು ಶ್ಲಾಘನೆಯೊಂದಿಗೆ ಜೊತೆಗೆ ಅಧಿಕಾರಿ ಸ್ವಾತಿಗೆ ಗೌರವ ಸಮರ್ಪಣೆ ಮಾಡಿದರು.

ಈಗಾಗಲೇ ಸೆಸ್ಕಾಂ ವಿದ್ಯುತ್ ಕೇಂದ್ರ ವತಿಯಿಂದ ನಡೆಯುತ್ತಿರುವ ನೂತನ ಕಂಬಗಳ ಅಳವಡಿಕೆ ಮತ್ತು ಬದಲಿ ತಂತಿ ಅಳವಡಿಕೆ ಸಮರ್ಪಕ ವಾಗಿ ರಸ್ತೆಯ ಹದ್ದುಬಸ್ತು ಅನ್ನು ಬಿಟ್ಟು ಅಳವಡಿಕೆ ಮಾಡುವ ಕಾರ್ಯ ಆಗಬೇಕಾಗಿದೆ ಎಂದು ವಿದ್ಯುತ್ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು.

ಅಧ್ಯಕ್ಷತೆ ವಹಿಸಿದ ವಿ.ಪಿ.ಶಶಿಧರ್ ಮಾತನಾಡಿ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಯುವ ನಿಧಿ ಯೋಜನೆಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿ ಸುವುದರ ಜೊತೆಯಲ್ಲಿ ಯೋಜನೆ ಯನ್ನು ಎಲ್ಲಾ ಫಲಾನುಭವಿಗಳಿಗೆ ದೊರಕುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣ ಗೌಡ, ಹೆಚ್.ಎನ್. ರಾಜಶೇಖರ್, ಶ್ರೀನಿವಾಸನ್, ಕುಮಾರ್, ಅಬ್ದುಲ್ ರಜಾಕ್, ರಫೀಕ್ ಖಾನ್, ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್ ಸೇರಿದಂತೆ ಕುಶಾಲನಗರ ತಾಲೂಕು ಅಹಾರ ಪರಿವೀಕ್ಷಣಾ ಅಧಿಕಾರಿ ಎಂ.ಎಸ್. ಸ್ಬಾತಿ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀ ದೇವಿ, ವಿದ್ಯುತ್ ಇಲಾಖೆಯ ಇಂಜಿನಿಯರ್ ಸೋಮೇಶ್ ಸೇರಿದಂತೆ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು.