ಮಡಿಕೇರಿ, ಆ. ೮: ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ವಿತರಣಾ ಸಮಾರಂಭವು ನಗರದ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಸಭಾಂಗಣದಲ್ಲಿ ತಾ. ೧೦ ರಂದು ಮಧ್ಯಾಹ್ನ ೩:೩೦ ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ಅವರು ವಹಿಸಲಿದ್ದು, ಕಾರ್ಯಕ್ರಮವನ್ನು ಮಡಿಕೇರಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ಎ. ನಿರಂಜನ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಪತ್ರಕರ್ತರ ೪೭ ಮಕ್ಕಳಿಗೆ ವಿದ್ಯಾನಿಧಿಯನ್ನು ವಿತರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಟ್ರಸ್ಟಿ ಮತ್ತು ಕೋಶಾಧಿಕಾರಿಗಳಾದ ಕೆ. ತಿಮ್ಮಪ್ಪ, ಟ್ರಸ್ಟಿಗಳಾದ ಟಿ.ಪಿ. ರಮೇಶ್, ಜಿ. ಚಿದ್ವಿಲಾಸ್, ಕೊಟ್ಟಿಯಂಡ ಜೀವನ ಚಿಣ್ಣಪ್ಪ, ವಿ.ಪಿ. ಸುರೇಶ್, ಅನಿಲ್ ಎಚ್.ಟಿ., ಜಗದೀಶ್ ಬೆಳ್ಳಿಯಪ್ಪ. ಶ್ರೀಧರ್ ಹೂವಲ್ಲಿ, ಮುಲ್ಲೆಂಗಡ ಮಧೋಶ್ ಪೂವಯ್ಯ ಉಪಸ್ಥಿತರಿರುತ್ತಾರೆ ಎಂದು ಟ್ರಸ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ತಿಳಿಸಿದ್ದಾರೆ.