ಕುಶಾಲನಗರ, ಆ. ೮: ಹುಣ್ಣಿಮೆಯ ಅಂಗವಾಗಿ ಕುಶಾಲನಗರದಲ್ಲಿ ಜೀವನದಿ ಕಾವೇರಿಗೆ ತಾ. ೯ ರಂದು (ಇಂದು) ೧೭೫ನೇ ಮಹಾ ಆರತಿ ಕಾರ್ಯಕ್ರಮ ನಡೆಯಲಿದೆ. ಕಾವೇರಿ ಮಹಾ ಆರತಿ ಬಳಗ ಆಶ್ರಯದಲ್ಲಿ ಕುಶಾಲನಗರ ರೋಟರಿ ಸಹಯೋಗದೊಂದಿಗೆ ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ಆರತಿ ಕ್ಷೇತ್ರದಲ್ಲಿ ಸಂಜೆ ೫:೩೦ಕ್ಕೆ ಕಾರ್ಯಕ್ರಮ ನಡೆಯಲಿದೆ.