ಮಡಿಕೇರಿ, ಆ. ೮: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ, ಹೊದ್ದೂರು ಬಹುಜನ ಕಾರ್ಮಿಕ ಸಂಘದ ವತಿಯಿಂದ ತಾ. ೯ ರಂದು (ಇಂದು) ವಿಶ್ವ ಬುಡಕಟ್ಟು ದಿನಾಚರಣೆ ನಡೆಯಲಿದೆ.

ಪಾಲೆಮಾಡು ಅಂಗನವಾಡಿ ಕೇಂದ್ರದಲ್ಲಿ ಮಧ್ಯಾಹ್ನ ೨ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷ ಹೆಚ್.ಎ. ಹಂಸ ಉದ್ಘಾಟಿಸಲಿದ್ದಾರೆ. ಸಂಸ್ಥೆ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ಬಹುಜನ ಕಾರ್ಮಿಕ ಸಂಘದ ಅಧ್ಯಕ್ಷ ಕೆ. ಮೊಣ್ಣಪ್ಪ, ಗ್ರಾ.ಪಂ. ಸದಸ್ಯರುಗಳಾದ ಕುಸುಮಾವತಿ, ಲಕ್ಷಿö್ಮ, ಹಮೀದ್, ವಾಟೆಕಾಡು ಸರಕಾರಿ ಶಾಲೆ ಮುಖ್ಯ ಶಿಕ್ಷಕ ಕುಮಾರಸ್ವಾಮಿ, ಎಂಡಿಎAಸಿ ಅಧ್ಯಕ್ಷ ಸುರೇಶ್ ಉಪಸ್ಥಿತರಿದ್ದು, ಚೊಟ್ಟೆಪಾರೆ ಹಾಡಿಯ ಜೆ.ಕೆ. ರಾಮು ಮುಖ್ಯ ಭಾಷಣ ಮಾಡಲಿದ್ದಾರೆ.