ವೀರಾಜಪೇಟೆ, ಆ. ೮: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ನೇಮಕಗೊಂಡಿದ್ದಾರೆ. ಒಂದು ವರ್ಷದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.