ಸುಂಟಿಕೊಪ್ಪ, ಆ. ೧೦ : ನಾಕೂರು-ಶಿರಂಗಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ಅನ್ನಪೂರ್ಣ ಸ್ವಸಹಾಯ ಸಂಘದ ೧೭ನೇ ವಾರ್ಷಿಕೋತ್ಸವ ಸಮಾರಂಭವು ಕಾನ್‌ಬೈಲ್‌ನಲ್ಲಿ ನಡೆಯಿತು.

ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಮಾತನಾಡಿ, ಹತ್ತಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ನಾವು ಯೋಜನೆಗಳನ್ನು ಪಡೆಯುವಾಗ ಮಾನದಂಡ ನಿರ್ಧಿಷ್ಟವಾದ ಗುರಿಯನ್ನು ಹೊಂದಿರಬೇಕು ಮತ್ತು ಅದನ್ನು ಶ್ರದ್ಧೆಯಿಂದ ನಿರ್ವಹಿಸುವ ಮೂಲಕ ಮರುಪಾವತಿಸಲು ಸಹಕಾರಿಯಾಗುತ್ತದೆ. ಯಾವುದೇ ನಿರ್ದಿಷ್ಟವಾದ ಗುರಿಯನ್ನು ಇರಿಸದೆ ಕಠಿಣ ಪರಿಶ್ರಮವಹಿಸದಿದ್ದರೇ ಮುಂದುವರಿಯಲು ಸಾಧ್ಯವಿಲ್ಲ. ಯೋಜನೆಯ ನೀಡಲಾಗುವ ಫಲಾನುಭವಿ ಪಟ್ಟಿಯಿಂದ ವಂಚಿತಗೊಳ್ಳವುದಲ್ಲದೆ ಇತರ ಸದಸ್ಯರಿಗೂ ಸಮಸ್ಯೆಗಳು ಎದುರಾಗುತ್ತದೆ ಎಂದು ಅವರು ಕಿವಿಮಾತು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾನ್‌ಬೈಲ್ ಒಕ್ಕೂಟದ ಉಪಾಧ್ಯಕ್ಷೆ ಗೀತಾ ವಹಿಸಿ ಮಾತನಾಡಿದರು. ಈ ಸಂದರ್ಭ ಶ್ರೀ. ಕ್ಷೆ.ಧ.ಗ್ರಾ.ಯೋ. ಒಕ್ಕೂಟದ ಕಾರ್ಯದರ್ಶಿ ಪುಷ್ಪಲತಾ, ಶ್ರೀ ಸರಸ್ವತಿ ಹಾಗೂ ಪರಮೇಶ್ವರ ಸ್ವ ಸಹಾಯ ಸಂಘದ ಸದಸ್ಯರು ಇದ್ದರು.