ಶ್ರೀಮಂಗಲ, ಆ. ೧೦: ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಗೂರಿಗೆ ಭೇಟಿ ನೀಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ತೀವ್ರ ಮಳೆಯಿಂದ ಹಾನಿಗೀಡಾಗಿ ಕುಸಿದಿದ್ದ ಸೇತುವೆಯ ನ್ನು ಪರಿಶೀಲಿಸಿದರು. ಸ್ಥಳೀಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ಬಳಿಕ ಇದೆ ವ್ಯಾಪ್ತಿಯಲ್ಲಿ ಹಾನಿಗೀಡಾದ ರಸ್ತೆ ಪರಿಶೀಲಿಸಿದರು. ಇದರ ಬಗ್ಗೆ ವರದಿಯನ್ನು ನೀಡಿ ವೈಜ್ಞಾನಿಕವಾಗಿ ದುರಸ್ತಿ ಕಾರ್ಯಕ್ಕೆ ಯಾವುದೆಲ್ಲ ಕ್ರಮ ಕೈಗೊಳ್ಳಬೇಕೆಂಬ ಮಾಹಿತಿಯನ್ನು ನೀಡುವಂತೆ ಸ್ಥಳದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಕುಟ್ಟ ವಲಯ ಅಧ್ಯಕ್ಷ ಹೆಚ್.ವೈ. ರಾಮಕೃಷ್ಣ, ಕೆ ಬಾಡಗ ಪಂಚಾಯಿತಿ ಸದಸ್ಯ ಚೆಪ್ಪುಡಿರ ಬೋಪಣ್ಣ, ಅಪ್ಪಣ್ಣ, ಶ್ರೀಮಂಗಲ ಪ್ಯಾಕ್ಸ್ ಅಧ್ಯಕ್ಷ ಪಲ್ವಿನ್ ಪೂಣಚ್ಚ ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.