ಮಡಿಕೇರಿ, ಆ. ೧೦: ಕಾಲೂರಿನಲ್ಲಿ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಎದೆಹಾಲಿನ ಮಹತ್ವ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ವಿಧಾನ, ಪೌಷ್ಟಿಕ ಆಹಾರ ಬೆಳೆಸಿ ಸೇವಿಸಲು ಪ್ರೋತ್ಸಾಹ, ಕೈ ತೊಳೆಯುವ ವಿಧಾನ, ಸ್ವಚ್ಛತೆ, ಸಾಂಕ್ರಾಮಿಕ ರೋಗಗಳು ಬರುವುದಂತೆ ಅನುಸರಿಸಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದರು.
ಆರೋಗ್ಯ ಇಲಾಖೆಯ ಹಿರಿಯ ಪ್ರಾಥಮಿಕ ಸುರಕ್ಷಾ ಅಧಿಕಾರಿ ದೇವಕಿ ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ಯೋಜನೆ, ಗರ್ಭಿಣಿ ಮತ್ತು ಬಾಣಂತಿ ಮಕ್ಕಳಿಗೆ ನೀಡುವ ಚುಚ್ಚುಮದ್ದು, ಎದೆಹಾಲಿನ ಮಹತ್ವದ ಬಗ್ಗೆ ವಿವರಿಸಿ ಮಕ್ಕಳ ಆರೈಕೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತರುಗಳಾದ ಕಾವೇರಮ್ಮ, ನೀಲಮ್ಮ, ಸಹಾಯಕಿ ಹೇಮಾವತಿ, ರೇಖಾ ಆಶಾ ಕಾರ್ಯಕರ್ತೆಯರು ಹಾಜರಿದ್ದರು.