ಕೂಡಿಗೆ, ಆ. ೧೦: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಗಿರಿಜನ ಸಮಗ್ರ ಅಭಿವೃದ್ಧಿ ಯೋಜನೆ ವತಿಯಿಂದ ಕೂಡಿಗೆ ಗ್ರಾಮ ಪಂಚಾಯಿತಿ ಹಾಗೂ ಬಸವನಹಳ್ಳಿಯಲ್ಲಿರುವ ತಾಲೂಕು ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಸಹಯೋಗದೊಂದಿಗೆ ಬ್ಯಾಡಗೊಟ್ಟ ಗ್ರಾಮದಲ್ಲಿ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಸವನಹಳ್ಳಿ ಸಹಕಾರ ಸಂಘದ ಉಪಾಧ್ಯಕ್ಷೆ ಕಾವೇರಿ ನೆರವೇರಿಸಿದರು. ಮುಖ್ಯ ಭಾಷಣಕಾರರಾಗಿ ಐ.ಎ. .ಎಸ್. ಸಿವಿಲ್ ಪರೀಕ್ಷೆಯನ್ನು ತೆಗೆದುಕೊಂಡಿರುವ ಬುಡಕಟ್ಟು ಜನಾಂಗದ ಯುವಕ ಜೆ.ಜಿ. ಸುರೇಶ್ ಮಾತನಾಡಿ, ಬುಡಕಟ್ಟು ಜನಾಂಗದ ಸಂಸ್ಕೃತಿ ಆಚಾರ ವಿಚಾರ ಕಲೆಗಳು ನಾಶವಾಗದಂತೆ ಉಳಿಸಿ ಬೆಳೆಸುವುದರ ಜೊತೆಯಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡಬೇಕಾದ ಗುರುತರವಾದ ಜವಾಬ್ದಾರಿ ನಮ್ಮದಾಗಿದೆ ಎಂದು ಹೇಳಿದರು.

ಪ್ರಪಂಚದ ೯೦ ದೇಶಗಳಲ್ಲಿ ಸುಮಾರು ೪೦೦ ರಿಂದ ೫೦೦ ಮಿಲಿಯನ್ ಬುಡಕಟ್ಟು ಜನಾಂಗದವರು ವಾಸಿಸುತ್ತಿದ್ದಾರೆ, ಇದರಲ್ಲಿ ವಿಶ್ವದ ಜನಸಂಖ್ಯೆಗೆ ಹೋಲಿಸಿದರೆ ೬.೨% ಬರುತ್ತದೆ. ೭ ಸಾವಿರಕ್ಕೂ ಹೆಚ್ಚು ವಿಭಿನ್ನ ಭಾಷೆಗಳನ್ನು ಮಾತನಾಡುವ ಸಮುದಾಯಗಳಾಗಿವೆ. ಸಮುದಾಯದವರು ಸಂವಿಧಾನದ ಹಕ್ಕುಗಳ ಬಗ್ಗೆ ಹೆಚ್ಚು ತಿಳುವಳಿಕೆಯನ್ನು ಪಡೆಯಲು ಮೊದಲನೆಯದಾಗಿ ಶಿಕ್ಷಿತರಾಗಬೇಕು, ಶಿಕ್ಷಣದ ಮೂಲಕ ಸಂವಿಧಾನ ಬದ್ಧ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಅರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಮುಂದುವರೆಯಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ವಹಿಸಿ ಮಾತನಾಡಿ, ಬುಡಕಟ್ಟು ಜನಾಂಗದವರು ದುಷ್ಚಟಗಳಿಂದ ದೂರವಾಗಿ ತಮ್ಮ ಬದುಕನ್ನು ಉತ್ತಮಗೊಳಿಸಿಕೊಳ್ಳಬೇಕು ಎಂದರು. ಸ್ಕೌಟ್ಸ್-ಗೈಡ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿಮ್ಯಾಥ್ಯೂ ಮಾತನಾಡಿ, ಬುಡಕಟ್ಟು ಜನಾಂಗದ ಆಚಾರ, ವಿಚಾರ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಬುಡಕಟ್ಟು ದಿನಾಚರಣೆಯನ್ನು ಏರ್ಪಡಿಸÀಲಾಗಿದೆ ಎಂದು ಹೇಳಿದರು. ಸ್ಕೌಟ್ಸ್-ಗೈಡ್‌ನ ಜಿಮ್ಮಿ ಸಿಕ್ವೇರಾ, ವÀiÁತನಾಡಿ, ಸಮುದಾಯ ಕೇಂದ್ರದಲ್ಲಿ ಮುಕ್ತದಳ ಆರಂಭಿಸುವ ಮೂಲಕ ಸಂಘಟನೆಯ ಮಹತ್ವÀ ತಿಳಿದುಕೊಳ್ಳುವ ಬಗ್ಗೆ ಮಾಹಿತಿಯಿತ್ತರು.

ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ, ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್. ಗಣೇಶ್ ಆದಿವಾಸಿ ರಕ್ಷಣಾ ಪರಿಷತ್ತಿನ ರಾಜ್ಯ ನಿರ್ದೇಶಕ ಬಿ.ಎ. ಗಂಗಾಧರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಶ್ರೀ, ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್, ಕೆ.ಎಸ್. ಶಿವಕುಮಾರ್, ಪಿ.ಡಿ.ಓ. ಮಂಜುಳಾ, ಸ್ಕೌಟ್ಸ್ - ಗೈಡ್ಸ್ ಸಂಸ್ಥೆಯ ಸ್ಥಾನೀಕ ಆಯುಕ್ತ ಎಚ್.ಆರ್. ಮುತ್ತಪ್ಪ, ಜಿಲ್ಲಾ ಸ್ಕೌಟ್ಸ್ನ ತರಬೇತಿ ಆಯುಕ್ತ ಕೆ.ಯು. ರಂಜಿತ್ , ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಎA. ವಸಂತಿ , ಜಿಲ್ಲಾ ಸಹಾಯಕ ಗೈಡ್ಸ್ ಆಯುಕ್ತೆ ಸುಲೋಚನ, ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ಇಂದಿರಾ ಸೇರಿದಂತೆ ಸ್ಥಳೀಯ ಸಂಸ್ಥೆಯ ನಿರ್ದೇಶಕರು, ಬ್ಯಾಡಗೊಟ್ಟ ಗ್ರಾಮಸ್ಥರು ಹಾಜರಿದ್ದರು.

ಇದೇ ಸಂದರ್ಭ ಸಮುದಾಯದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕೆ.ಯು. ರಂಜಿತ್ ನಿರೂಪಿಸಿ, ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್ ಸ್ವಾಗತಿಸಿ, ಸುಲೋಚನ ವಂದಿಸಿದರು.