ಮಡಿಕೇರಿ, ಆ. ೧೦: ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಶಿಕ್ಷಕರು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿಯಾಗಿ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ ಸಲ್ಲಿಸಿದರು.
ವಿಧಾನಸೌಧ ಕಚೇರಿಯಲ್ಲಿ ಪೊನ್ನಣ್ಣ ಅವರನ್ನು ಭೇಟಿಯಾಗಿ ವೇತನ ಹೆಚ್ಚಳ ಮತ್ತು ಸೇವಾಭದ್ರತೆಗೆ ಸಂಬAಧಿಸಿದAತೆ ಗಮನ ಸೆಳೆದರು. ವಿವಿಧ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಗೌರವಧನ ಮತ್ತು ಹೊರಗುತ್ತಿಗೆಯಡಿ ರಾಜ್ಯದಲ್ಲಿ ಸುಮಾರು ೩೦೦ಕ್ಕೂ ಅಧಿಕ ಶಿಕ್ಷಕರು ಕಳೆದ ೨೨ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಸಂಬಳ ಹೆಚ್ಚಳದೊಂದಿಗೆ ಸೇವಾ ಭದ್ರತೆ ಒದಗಿಸಲು ಕ್ರಮವಹಿಸಬೇಕೆಂದು ಮನವಿ ಮಾಡಿದರು.