ಕೂಡಿಗೆ, ಆ. ೧೦: ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಸಮುದಾಯ ಆರೋಗ್ಯ ಕೇಂದ್ರ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಆರೋಗ್ಯ ಅಧಿಕಾರಿ ಡಾ. ಇಂದುಧರ್ ನೆರವೇರಿಸಿದರು. ಮಗುವಿಗೆ ಬೇಕಾಗುವ ಪೌಷ್ಟಿಕಾಂಶ ಮತ್ತು ಕಾರ್ಬೋಹೈಡ್ರೇಟ್‌ಗಳು ಎದೆಹಾಲಿನಲ್ಲಿ ಹೇರಳವಾಗಿರುತ್ತದೆ ಎಂದು ಅವರು ತಿಳಿಸಿದರು. ಸಮುದಾಯ ಆರೋಗ್ಯ ಕೇಂದ್ರದ ಶಸ್ತçಚಿಕಿತ್ಸಕರು ಮತ್ತು ಆಡಳಿತ ಅಧಿಕಾರಿ ಡಾ. ಮಧುಸೂಧನ್ ಮಾತನಾಡಿ, ಸ್ತನ್ಯಪಾನವು ಮಗುವನ್ನು ಸೋಂಕಿನಿAದ ರಕ್ಷಿಸುತ್ತದೆ. ಅತಿಸಾರ, ಉಸಿರಾಟದ ಸೋಂಕುಗಳು ಮತ್ತು ಇತರೆ ಖಾಯಿಲೆಗಳ ಅಪಾಯಗಳನ್ನು ಕಡಿಮೆ ಮಾಡುತ್ತದೆ. ತಾಯಂದಿರಲ್ಲಿ ಸ್ತನ ಮತ್ತು ಅಂಡಾಶಯದ ಕ್ಯಾನ್ಸರ್‌ನಂತಹ ಅಪಾಯವನ್ನು ಕಡಿಮೆ ಮಾಡುತ್ತದೆ. ಹೆರಿಗೆಯ ನಂತರ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮಾತನಾಡಿದರು. ಈ ಸಂದರ್ಭ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಇಂದಿರಾ, ಆಶಾ ಕಾರ್ಯ ಕರ್ತರು, ಗರ್ಭಿಣಿಯರು, ಬಾಣಂತಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.