ಮಡಿಕೇರಿ, ಆ. ೧೧: ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರವು ‘ವೀರ್ ಪರಿವಾರ್ ಸಹಾಯತಾ ಯೋಜನೆ ೨೦೨೫’ ಎಂಬ ಯೋಜನೆಯು ಈಗಾಗಲೇ ಆರಂಭಿಸಲಾಗಿದೆ.
ಈ ಯೋಜನೆಯು ಕೇಂದ್ರೀಯ ಸೈನಿಕ ಮಂಡಳಿಯ ಸಹಯೋಗದೊಂದಿಗೆ ಮೀಸಲಾದ ಕಾನೂನು ಸೇವಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ರಕ್ಷಣಾ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಉಚಿತ ಮತ್ತು ಸಮರ್ಥ ಕಾನೂನು ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದು, ಈ ಯೋಜನೆಯನ್ವಯ ಇಲಾಖಾ ಕಚೇರಿಯಲ್ಲಿ ನಿಗದಿತ ವಕೀಲರು ವಾರದಲ್ಲಿ ಒಂದು ದಿನ ಲಭ್ಯವಿದ್ದು, ಕಾನೂನು ಸಹಾಯ ಬೇಕಿರುವ ಕೊಡಗು ಜಿಲ್ಲೆಯ ಮಾಜಿ ಸೈನಿಕರು ಮತ್ತು ಅವಲಂಬಿತರು ಕಚೇರಿ ದಿನಗಳಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಕಾರ್ಯಾಲಯವನ್ನು ಸಂಪರ್ಕಿಸಿ ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.