ಮಡಿಕೇರಿ, ಆ. ೧೧: ಕಳೆದ ವಾರ ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಕೃಷಿಕರೊಬ್ಬರನ್ನು ಕಾಡಾನೆ ಮೆಟ್ಟಿ ಕೊಂದಿದೆ. ಆದ್ದರಿಂದ ಆನೆಗಳನ್ನು ಹಿಡಿದು ಸಾಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಸಂಪಾಜೆ ಅರಣ್ಯ ಇಲಾಖೆ ಎದುರು ಬಿಜೆಪಿ ಪ್ರತಿಭಟನೆ ನಡೆಸಿದೆ.

ಮಾಜಿ ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕಾಡಾನೆಗಳ ಹಾವಳಿ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶÀ ವ್ಯಕ್ತಗೊಂಡಿತು. ಬಿಜೆಪಿ ಕೃಷಿ ಮೋರ್ಚಾ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಸೇರಿದಂತೆ ಇತರರು ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.