ಮಡಿಕೇರಿ, ಆ. ೧೨: ಕೊಡಗು ಜಿಲ್ಲಾಡಳಿತ ವತಿಯಿಂದ ೭೯ನೇ ಸ್ವಾತಂತ್ರö್ಯ ದಿನಾಚರಣೆಯು ಆ.೧೫ ರಂದು ಬೆ.೯ ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಇತರರು ಪಾಲ್ಗೊಳ್ಳಲಿದ್ದಾರೆ.