ನಾಪೋಕ್ಲು, ಆ. ೧೨: ಇಲ್ಲಿನ ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ ನಾಪೋಕ್ಲು, ಕೊಳಕೇರಿ ಹಾಗೂ ಬೇತು ಗ್ರಾಮಗಳ ೨೦೨೪-೨೫ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ತಾ. ೧೪ ರಂದು ಬೆಳಿಗ್ಗೆ ೧೧ ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಂದರ್ಭ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಮೋಹನ್ ಹಾಗೂ ತಾಲೂಕು ಸಂಯೋಜಕ ಸುಂದರೇಶ್ ನೋಡೆಲ್ ಅಧಿಕಾರಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.