ಮಡಿಕೇರಿ, ಆ. ೧೨: ವಿಧಾನಸಭಾ ಮುಂಗಾರು ಅಧಿವೇಶನದ ಮೊದಲ ದಿನವೇ ಸದನದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು, ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿದರು.

ಕ್ಷೇತ್ರದ ಹಾಗೂ ಕೊಡಗಿನ ಜನತೆಯನ್ನು ನಿರಂತರ ಕಾಡುತ್ತಿರುವ ಕೆಲವು ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಹಾಗೂ ನಗರಾಭಿವೃದ್ಧಿ ಸಚಿವರಾದ ಬೈರತಿಸುರೇಶ್ ಅವರೊಂದಿಗೆ ಶಾಸಕರು ಚರ್ಚಿಸಿದರು.