ಬೆAಗಳೂರು, ಆ. ೧೪: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಆದೇಶ ರದ್ದು ಮಾಡಿದ ಬೆನ್ನಲ್ಲೇ ಬೆಂಗಳೂರಿನ ಹೊಸಕೆರೆಹಳ್ಳಿಯ ಅಪಾರ್ಟ್ಮೆಂಟ್ ಬಳಿ ನಟ ದರ್ಶನ್, ಪವಿತ್ರ ಗೌಡ ಸೇರಿ ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್ನ ದ್ವಿ ಸದಸ್ಯ ಪೀಠ ಪ್ರಕಟಿಸಿತ್ತು. ಹೀಗಾಗಿ ಬೆಂಗಳೂರು ಪೊಲೀಸರು ಹೊಸಕೆರೆಹಳ್ಳಿಯಲ್ಲಿರುವ ದರ್ಶನ್ ಪತ್ನಿ ವಿಜಯಲಕ್ಷಿö್ಮ ಅವರ ನಿವಾಸದ ೧೫ನೇ ಮಹಡಿಯಲ್ಲಿರುವ ಫ್ಲಾö್ಯಟ್ ನಂಬರ್ ೪೧೫೪ರಲ್ಲಿ ಎ೨ ಆರೋಪಿ ದರ್ಶನ್ ಅವರನ್ನು ಇನ್‌ಸ್ಪೆಕ್ಟರ್‌ಗಳಾದ ನಾಗೇಶ್ ಮತ್ತು ಸುಬ್ರಮಣ್ಯ ನೇತೃತ್ವದ ತಂಡ ಬಂಧಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದೆ.

ದರ್ಶನ್ ಬಂಧನಕ್ಕೂ ಮುನ್ನಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ೧ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಸುಪ್ರೀಂ ಕೋರ್ಟ್ನಲ್ಲಿ ರದ್ದಾಗುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸದಲ್ಲಿ ಪೊಲೀಸರು ಬಂಧಿಸಿ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದರು.