ಕೂಡಿಗೆ, ಆ. ೧೪: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ೧೩೩ ಕೆರೆಗಳ ಒತ್ತುವರಿಯನ್ನು ತೆರವು ಮಾಡಲಾಗಿದೆ ಎಂದು ತಹಶೀಲ್ದಾರ್ ಕಿರಣ್ ಗೌರಯ್ಯ ಮಾಹಿತಿ ನೀಡಿದ್ದಾರೆ.
ಕುಶಾಲನಗರ ಹಾಗೂ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು ೧೩೯ ಕೆರೆಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿತ್ತು. ಈ ಪೈಕಿ ೧೩೩ ಕೆರೆಗಳ ಒತ್ತುವರಿ ನಿಯಮಾನುಸಾರ ತೆರವು ಮಾಡಿ ದಾಖಲೆಗಳನ್ನು ಆಯಾ ಸ್ಥಳೀಯಾಡಳಿತಕ್ಕೆ ಹಸ್ತಾಂತರಿಸಲಾಗಿದೆ. ಕೆರೆಗಳ ಸರ್ವೆ ನಡೆಸಿ, ಹದ್ದುಬಸ್ತು ಗುರುತಿಸಿ ನಂತರ ಅದಕ್ಕೆ ಸಂಬAಧಿಸಿದ ಪತ್ರಗಳನ್ನು ಆಯಾ ಗ್ರಾಮ ಪಂಚಾಯಿತಿ, ಪುರಸಭೆ ವ್ಯಾಪ್ತಿಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.