ಚೆಯ್ಯಂಡಾಣೆ, ಆ. ೧೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಕ್ಕಬ್ಬೆ ಒಕ್ಕೂಟದ ಸದಸ್ಯರು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು.
ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಶ್ರಮದಾನ ಕೈಗೊಂಡ ಸಂಘದ ಸದಸ್ಯರು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಆವರಣ ಹಾಗೂ ಮೆಟ್ಟಿಲುಗಳನ್ನು ಶುಚಿಗೊಳಿಸಿದರು.
ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಉಮಾಲಕ್ಷಿö್ಮ, ಕಕ್ಕಬ್ಬೆ ಒಕ್ಕೂಟದ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.