ಕುಶಾಲನಗರ, ಆ. ೧೫: ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಶ್ರಾವಣ ಮಾಸ ಹುಣ್ಣಿಮೆ ಅಂಗವಾಗಿ ಪೂಜಾ ಕಾರ್ಯಕ್ರಮವು ಜರುಗಿತು.
ಪ್ರತಿಮೆಗೆ ಹಾಲು, ತುಪ್ಪ, ಜೇನು, ಎಳನೀರು, ಅರಿಶಿಣ, ಕುಂಕುಮಗಳಿAದ ಅಭಿಷೇಕ ಮಾಡಲಾಯಿತು.
ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು.
ಈ ಸಂದರ್ಭ ಬಾರವಿ ಕನ್ನಡ ಸಂಘದ ಪ್ರಮುಖ ರವೀಂದ್ರ ಪ್ರಸಾದ್ ಮಾತನಾಡಿ, ಕಾವೇರಿ ನದಿ ನೀರನ್ನು ಕೋಟ್ಯಂತರ ಮಂದಿ ಆಶ್ರಯಿಸಿದ್ದು, ಜನರು ಕಸ ತ್ಯಾಜ್ಯ ಎಸೆಯುವುದರಿಂದ ನೀರು ಮಲಿನವಾಗುತ್ತಿದೆ. ಸ್ವಚ್ಛ ಪರಿಸರ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಬಾರವಿ ಕನ್ನಡ ಅಭಿಮಾನಿ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ಸೋಮಶೇಖರ್, ಮತ್ತಿತರರು ಇದ್ದರು.