ವೀರಾಜಪೇಟೆ, ಆ. ೧೫: ವೀರಾಜಪೇಟೆಯ ಛತ್ರಕೆರೆ ಬಳಿಯ ಶ್ರೀ ವೀರಾಂಜನೇಯ ಸ್ವಾಮಿ ದೇಗುಲದಲ್ಲಿ ಪ್ರತಿ ವರ್ಷವೂ ಆಚರಿಸಲಾಗುವ ಶ್ರೀ ರಾಘವೇಂದ್ರ ಸ್ವಾಮಿಗಳ ೩೫೦ನೇ ಆರಾಧನಾ ಮಹೋತ್ಸವವು ಭಕ್ತಗಣಗಳ ನಡುವೆ ಶ್ರದ್ಧಾಭಕ್ತಿಯಿಂದ ನಡೆಯಿತು.
ಆರಾಧನಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ಸ್ವಾಮಿಗೆ ವಿವಿಧ ಅಭಿಷೇಕ ಪೂಜೆಗಳು, ಅಲಂಕಾರ ಪೂಜೆ ಮತ್ತು ಭಜನೆ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಶ್ರೀ ಸ್ವಾಮಿಗೆ ಮಹಾ ಮಂಗಳಾರತಿ ಪೂಜೆ ನಡೆದು ಪ್ರಸಾದ ವಿನಿಯೋಗದ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು,
ಈ ಸಂದರ್ಭ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯವರು ಹಾಗೂ ಸದಸ್ಯರು ಹಾಜರಿದ್ದರು.