ಕಡಂಗ, ಆ. ೧೫: ಮಡಿಕೇರಿ ತಾಲೂಕು ಚೆಟ್ಟಿಮಾನಿ ಗ್ರಾಮದ ಕುಂದಚೇರಿಯ ನಿವಾಸಿ ಹಂಸ ಕೆ.ಕೆ. ಅವರನ್ನು, ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರನ್ನಾಗಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. ಕೊಡಗು ಜಿಲ್ಲೆ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ ಅವರ ಶಿಫಾರಸಿನ ಮೇರೆಗೆ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷÀ ಧರ್ಮಜ ಉತ್ತಪ್ಪ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ಇಸ್ಮಾಯಿಲ್ ಅವರ ಅನುಮೋದನೆ ಯೊಂದಿಗೆ ಈ ನೇಮಕಾತಿ ಆದೇಶ ಮಾಡಲಾಗಿದೆ.