ಸೋಮವಾರಪೇಟೆ, ಆ. ೧೫: ಇಲ್ಲಿನ ತಾಲೂಕು ಕಚೇರಿ ಸಭಾಂಗ ಣದಲ್ಲಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕಾರ ಮತ್ತು ಕುಂದು ಕೊರತೆ ಸಭೆ ನಡೆಸಿದರು.

ಸಭೆಯ ಅಧ್ಯಕ್ಷತೆಯನ್ನು ಲೋಕಾಯುಕ್ತ ಡಿವೈಎಸ್‌ಪಿ ದಿನಕರ ಶೆಟ್ಟಿ ವಹಿಸಿದ್ದರು. ಸರ್ಕಾರಿ ಕಚೇರಿಗಳಿಗೆ ಸಾಕಷ್ಟು ಜನರು ಮಾಹಿತಿ ಹಕ್ಕಿನಡಿಯಲ್ಲಿ ಮಾಹಿತಿ ಕೊಡುವಂತೆ ಮನವಿ ಮಾಡಿದರೂ, ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಸಾರ್ವಜನಿಕರು ದೂರುತಿದ್ದಾರೆ. ಇಲಾಖಾಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸದೆ, ಸರಿಯಾದ ಮಾಹಿತಿಯನ್ನು ಎಲ್ಲರೂ ನೀಡಬೇಕು ಎಂದು ತಾಕೀತು ಮಾಡಿದರು.

ಹಲವು ಇಲಾಖೆಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಹೆಚ್ಚಿನವರು ಕೆಲಸ ಮಾಡುತ್ತಿದ್ದಾರೆ. ಆದರೆ, ಇವರಿಗೆ ಹಾಜರಾತಿ ಪುಸ್ತಕದಲ್ಲಿ ಹಾಜರಾತಿ ಪಡೆಯುತ್ತಿಲ್ಲ. ಕಡ್ಡಾಯವಾಗಿ ಹಾಜರಾತಿ ಪುಸ್ತಕವನ್ನು ಎಲ್ಲ ಇಲಾಖೆಯವರು ನಿರ್ವಹಿಸಿ, ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲರೂ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಬೇಕು.

ಇಲಾಖೆಗಳಿಗೆ ಭೇಟಿ ನೀಡುವ ಸಂದರ್ಭ ಹಾಜರಾತಿ ಪುಸ್ತಕವನ್ನು ನಿರ್ವಹಿಸದಿರುವುದು ಕಂಡುಬAದಲ್ಲಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಾಲೂಕಿನ ಹೊಸಳ್ಳಿ, ಯಲಕನೂರು ಗ್ರಾಮಗಳ ಹಲವೆಡೆ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಅರಣ್ಯ ಮತ್ತು ಕಾಡುಪ್ರಾಣಿಗಳಿಗೆ ಸಮಸ್ಯೆಯಾಗುತ್ತಿದೆ. ೨೦೨೩ರಲ್ಲಿ ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿ.ಟಿ. ಮದನ್ ದೂರು ನೀಡಿದರು.

ಇದರೊಂದಿಗೆ ತಾಲೂಕಿನ ನಗರೂರು ಗ್ರಾಮದ ಸರ್ಕಾರಿ ಕೆರೆ ಜಾಗವನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಸಂಬAಧಿಸಿ ದಾಖಲೆಯೊಂದಿಗೆ ತಹಶೀಲ್ದಾರರಿಗೆ ದೂರು ನೀಡಲಾಗಿದೆ. ಇಲ್ಲಿಯವರೆಗೆ ಒತ್ತುವರಿ ತೆರವುಗೊಳಿಸಿ, ಒತ್ತುವರಿದಾರರ ಮೇಲೆ ಕ್ರಮ ತೆಗೆದುಕೊಳ್ಳಲು ಕಂದಾಯ ಇಲಾಖೆ ಮುಂದಾಗಿಲ್ಲ ಎಂದು ತಿಳಿಸಿದರು.

ತಾಲೂಕಿನ ಅಂಜನಗೇರಿ ಬೆಟ್ಟಗೇರಿಯಲ್ಲಿ ದೇವರ ಕಾಡನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡು ಮರಗಳನ್ನು ಕಡಿದು ಕಾಫಿ ತೋಟವನ್ನಾಗಿ ಪರಿವರ್ತಿಸಿ, ಅರಣ್ಯವನ್ನು ನಾಶ ಮಾಡಿದ್ದಾರೆ. ಇವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಕೊಡಗು ಸೇವಾ ಕೇಂದ್ರದ ಸಂಚಾಲಕ ಟಿ.ಎಂ. ಸೋಮಯ್ಯ ದೂರು ನೀಡಿದರು.

ಸಭೆಯಲ್ಲಿದ್ದ ತಹಶೀಲ್ದಾರ್ ಕೃಷ್ಣಮೂರ್ತಿ ಮತ್ತು ಎಡಿಎಲ್‌ಆರ್ ಪರಮೇಶ್ ಅವರಿಗೆ ೨೦೨೩ ರಿಂದಲೂ ದೂರು ನೀಡಿದ ಅರ್ಜಿಗಳು ಬಾಕಿ ಉಳಿದಿವೆ. ಕೂಡಲೇ ಸ್ಥಳ ಪರಿಸೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದರು.

ಸಭೆಯಲ್ಲಿ ಇನ್ಸ್ಪೆಕ್ಟರ್ ಲೋಕೇಶ್, ವೀಣಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು ಪಾಲ್ಗೊಂಡಿದ್ದರು.