ಮುಳ್ಳೂರು, ಆ. ೧೫: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಡಿಕೇರಿ, ಅಮ್ಮ ಚಾರಿಟೇಬಲ್ ಟ್ರಸ್ಟ್ ಹಾಗೂ ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆ ಮತ್ತು ರೆಟಿನಾಕೇರ್ ಸೆಂಟರ್ ಇವರ ಸಂಯುಕ್ತ ಆಶ್ರಯದಲ್ಲಿ ಸಮೀಪದ ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭ ಮಾತನಾಡಿದ ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಪರ್ಣ ಕೃಷ್ಣಾನಂದ್ ಪ್ರತಿಯೊಬ್ಬರೂ ಕಣ್ಣಿನ ಆರೋಗ್ಯದ ಕಡೆಗೆ ನಿಗಾವಹಿಸಬೇಕು ಸಾಮಾನ್ಯವಾಗಿ ನಡು ವಯಸ್ಕರಿಂದ ವೃದ್ದ ವಯಸ್ಕರಿಗೆ ಬಿ.ಪಿ., ಶುಗರ್ ಸಮಸ್ಯೆಗಳಿರುವುದರಿಂದ ಇದು ಕಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಕಣ್ಣಿನ ಪೊರೆ ಮತ್ತು ಅಂಧತ್ವ ಸಮಸ್ಯೆ ಉಂಟಾಗಬಹುದು. ಈ ನಿಟ್ಟಿನಲ್ಲಿ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು. ಆರೋಗ್ಯ ಇಲಾಖೆ ಅಂಧತ್ವ ಸಮಸ್ಯೆ ನಿವಾರಣೆಗೋಸ್ಕರವಾಗಿ ಉಚಿತ ಕಣ್ಣಿನ ತಪಾ¸ಣಾ ಶಿಬಿರವನ್ನು ಹಮ್ಮಿಕೊಂಡು ಕಣ್ಣಿನ ಪೊರೆ ಸಮಸ್ಯೆ ಇರುವ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಹತ್ತಿರದಲ್ಲಿರುವ ಕಣ್ಣಿನ ಆಸ್ಪತ್ರೆಗೆ ಕೊಂಡೊಯ್ದು ಫಲಾನುಭವಿಗೆ ಉಚಿತ ಕಣ್ಣಿನ ಪೊರೆ ಶಸ್ತçಚಿಕಿತ್ಸೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಇದೆರೀತಿಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಕಣ್ಣಿನ ಪೊರೆ ಸಮಸ್ಯೆ ಇರುವ ಪಲಾನುಭವಿಗಳನ್ನು ಗುರುತಿಸಿ ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆಗೆ ಕೊಂಡೊಯ್ದು ಉಚಿತ ಕಣ್ಣಿನ ಪೊರೆ ಶಸ್ತçಚಿಕಿತ್ಸೆ ಮಾಡಿಸಲಾಗುತ್ತದೆ ಈ ನಿಟ್ಟಿನಲ್ಲಿ ಕಣ್ಣಿನ ಸಮಸ್ಯೆ ಇರುವವರು ಶಿಬಿರದ ಲಾಭವನ್ನು ಸದುಪಯೋಗಿಸಿಕೊಳ್ಳುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್, ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆಯ ನೇತ್ರಾ ಪರೀಕ್ಷಕಿ ಪೂಜಾ, ವಿದ್ಯಾ, ಅಭಿಷೇಕ್ ಹಾಜರಿದ್ದರು.