ಮಡಿಕೇರಿ, ಆ. ೧೫: ೨೦೨೫-೨೬ನೇ ಸಾಲಿನ ಬಿ.ಎಸ್ಸಿ ಹಾಗೂ ಜಿಎನ್‌ಎಮ್ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಮೂಲಕ ಪ್ರೋತ್ಸಾಹಧನಕ್ಕಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

೨೦೨೫-೨೬ನೇ ಸಾಲಿಗೆ ಬಿಎಸ್ಸಿ ಹಾಗೂ ಜಿಎನ್‌ಎಮ್ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/ Sevಚಿsiಟಿಜhu/ಆeಠಿಚಿಡಿಣmeಟಿಣSeಡಿviಛಿes ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಈ ಮೂಲಕ ಕೋರಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: ೮೫೪೮೦೬೮೫೧೯, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ: ೯೯೭೨೭೯೯೦೯೧ ಹಾಗೂ ತಾಲೂಕು ಮಾಹಿತಿ ಕೇಂದ್ರ ವೀರಾಜಪೇಟೆ ದೂರವಾಣಿ ಸಂಖ್ಯೆ: ೯೯೦೦೭೩೧೦೩೭ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಪ್ರೋತ್ಸಾಹಧನಕ್ಕೆ

ಮಡಿಕೇರಿ: ಮುಖ್ಯಮಂತ್ರಿಗಳು ೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದಲ್ಲಿ "ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. ೫೦ ಸಾವಿರ ನೀಡಲಾಗುವುದು" ಎಂದು ಸರ್ಕಾರ ಪ್ರಕಟಿಸಿದೆ.

ಅದರಂತೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. ೫೦ ಸಾವಿರ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಲಾಗಿದೆ. ಹಾಗೆಯೇ ಕೊಡಗು ಜಿಲ್ಲೆಗೆ ೪೦ ಗುರಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಟ ೧೦ ಜೋಡಿಗಳು ಭಾಗವಹಿಸಿರತಕ್ಕದ್ದು. ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಟ ೧೮ ವರ್ಷದಿಂದ ಗರಿಷ್ಠ ೪೨ ವರ್ಷಗಳು, ವರನಿಗೆ ಕನಿಷ್ಟ ೨೧ ವರ್ಷದಿಂದ ಗರಿಷ್ಠ ೪೫ ವರ್ಷ ವಯಸ್ಸು ಆಗಿರತಕ್ಕದ್ದು. ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ರೂ. ೨.೫೦ ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ. ೫ ಲಕ್ಷಗಳನ್ನು ಮೀರತಕ್ಕದ್ದಲ್ಲ. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವದುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ ದೂರವಾಣಿ ೯೯೭೨೭೯೯೦೯೧, ತಾಲೂಕು ಮಾಹಿತಿ ಕೇಂದ್ರ ವೀರಾಜಪೇಟೆ ದೂರವಾಣಿ ಸಂಖ್ಯೆ: ೯೯೦೦೭೩೧೦೩೭, ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: ೮೫೪೮೦೬೮೫೧೯ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣಮೂರ್ತಿ ಆರ್. ತಿಳಿಸಿದ್ದಾರೆ.

ಮೀನುಗಾರಿಕೆ ಇಲಾಖೆಯಿಂದ

ಮಡಿಕೇರಿ: ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಗಿರಿಜನ ಉಪ ಯೋಜನೆಯಡಿ (ಟಿಎಸ್‌ಪಿ) “ಮೀನು ಹಿಡಿಯುವ ಸಲಕರಣೆಗಳ ವಿತರಣೆ” ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ “ಮೀನು ಹಿಡಿಯುವ ಸಲಕರಣೆಗಳನ್ನು” ಉಚಿತವಾಗಿ ವಿತರಿಸಲು “ಸೇವಾ ಸಿಂಧು” ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಮೀನುಗಾರರಿಗೆ/ ಮೀನು ಕೃಷಿಕರಿಗೆ ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಪೂರ್ಣ/ ಅರೇಕಾಲಿಕ ಮೀನುಗಾರರಾಗಿರಬೇಕು. ಕೊಡಗು ಜಿಲ್ಲೆಯಲ್ಲಿ ನೆಲೆಸಿರಬೇಕು.

ಅರ್ಜಿಯೊಂದಿಗೆ ಭಾವಚಿತ್ರ-೨(ಪಾಸ್‌ಪೋರ್ಟ್ ಸೈಜ್), ವಿಳಾಸ ಪುರಾವೆ, ಜಾತಿ ಮತ್ತು ಆಧಾಯ ಪ್ರಮಾಣ ಪತ್ರ (ನೂತನ ಆರ್‌ಡಿ ಸಂಖ್ಯೆ ಒಳಗೊಂಡಿರಬೇಕು). ಮೀನುಗಾರಿಕೆಯಲ್ಲಿ ತೊಡಗಿರುವ ಕುರಿತು ದೃಢೀಕರಣ ಪ್ರಮಾಣ ಪತ್ರ / ಪರವಾನಗಿ ಪ್ರತಿ. ಪಡಿತರ ಚೀಟಿ ಅಥವಾ ಇತರೆ ದಾಖಲಾತಿಗಳ ಪ್ರತಿ.

ಆಯ್ಕೆ ಪ್ರಕ್ರಿಯೆ ಸರ್ಕಾರದ ನಿಯಮಾನುಸಾರ ನಿಗಧಿಪಡಿಸಿರುವ ಗುರಿ ರೀತ್ಯಾ ಮಾಡಲಾಗುವುದು ನಿಗದಿಪಡಿಸಿರುವ ಗುರಿಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗಿದ್ದಲ್ಲಿ ಜಿಲ್ಲಾ ಪಂಚಾಯಿತಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳ ಆಯ್ಕೆ ಸಮಿತಿಯಿಂದ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗೆ hಣಣಠಿs://ಜಿisheಡಿies.ಞಚಿಡಿಟಿಚಿಣಚಿಞಚಿ.gov.iಟಿ/ಜಿisheಡಿies-ಞoಜಚಿgu/ಠಿubಟiಛಿ/ ನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಚಿನ್ ತಿಳಿಸಿದ್ದಾರೆ.

ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ

ಮಡಿಕೇರಿ: ೨೦೨೫-೨೬ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿ ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಅಥವಾ ಸಮಾಜ ಕಲ್ಯಾಣ ಇಲಾಖಾ ವೆಬ್‌ಸೈಟ್ (hಣಣಠಿs://sತಿಜ.ಞಚಿಡಿಟಿಚಿಣಚಿಞಚಿ.gov.iಟಿ/) ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ ೯೪೮೦೮೪೩೧೫೭ ನ್ನು ಸಂಪರ್ಕಿಸಬಹುದಾಗಿದೆ.

ಸ್ವಯಂ-ಉದ್ಯೋಗ (ನೇರಸಾಲ) ಯೋಜನೆ (ಘಟಕ ವೆಚ್ಚ ರೂ. ೧ ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ. ೨ ಲಕ್ಷ), ಉದ್ಯಮಶೀಲತಾ ಯೋಜನೆ (ಸರಕು ಸಾಗಾಣಿಕೆ/ ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ)(ಘಟಕ ವೆಚ್ಚ ರೂ. ೪ ಲಕ್ಷ), ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಪೊನ್ನಂಪೇಟೆ ತಾಲೂಕು ಹಾಗೂ ವೀರಾಜಪೇಟೆ ತಾಲೂಕು ವ್ಯಾಪ್ತಿಗೆ ಬರುವ ಫಲಾನುಭವಿಗಳು ಸಂಬAಧಿಸಿದ ದಾಖಲಾತಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-೨) ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ವೀರಾಜಪೇಟೆ ತಾಲೂಕು ಇಲ್ಲಿಗೆ ಸಲ್ಲಿಸಬೇಕು ಎಂದು ವೀರಾಜಪೇಟೆ ತಾಲೂಕು, ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.