ರಾಷ್ಟಿçÃಯ ಗ್ರಂಥಪಾಲಕರ ದಿನಾಚರಣೆ
ಶನಿವಾರಸಂತೆ, ಆ. ೧೫: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯದಲ್ಲಿ ಮಂಗಳವಾರ ರಾಷ್ಟಿçÃಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿಗುರು ಮಾತನಾಡಿ, ಗ್ರಂಥಾಲಯ ಜ್ಞಾನದ ದೇವಾಲಯದಂತಿದೆ. ರಾಷ್ಟಿçÃಯ ಗ್ರಂಥಪಾಲಕ ರಂಗನಾಥ್ ಅವರ ಕೊಡುಗೆಯನ್ನು ಸ್ಮರಿಸುವ ದಿನವೇ ಗ್ರಂಥಪಾಲಕರ ದಿನಾಚರಣೆಯಾಗಿದೆ. ಮಕ್ಕಳಲ್ಲಿ ಚಿಕ್ಕಂದಿನಿAದಲೇ ಓದುವ ಅಭ್ಯಾಸವನ್ನು ಮೂಡಿಸಬೇಕು. ದುಂಡಳ್ಳಿ ಗ್ರಂಥಾಲಯದ ಕೀರ್ತಿ ರಾಜ್ಯಮಟ್ಟದಲ್ಲಿ ಹರಡಲು ಗ್ರಂಥಪಾಲಕಿ ದಿವ್ಯಾ ಅವರ ಪರಿಶ್ರಮವೇ ಕಾರಣ ಎಂದರು.
ಮುಖ್ಯ ಅತಿಥಿ ಸಾಹಿತಿ ಶ.ಗ. ನಯನತಾರಾ ಮಾತನಾಡಿ, ರಾಷ್ಟಿçÃಯ ಗ್ರಂಥಪಾಲಕರ ದಿನಾಚರಣೆಯನ್ನು ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಆಚರಿಸಲಾಗುತ್ತದೆ. ಇವರು ಗ್ರಂಥಾಲಯ ವಿಜ್ಞಾನಕ್ಕೆ ನೀಡಿದ ಕೊಡುಗೆ ಅಪಾರ. ಪುಸ್ತಕಗಳನ್ನು, ಗ್ರಂಥಗಳನ್ನು ಸಂಗ್ರಹಿಸುವ ಸ್ಥಳವೇ ಗ್ರಂಥಾಲಯ. ಸಾಹಿತ್ಯ, ಕಲೆ, ವಿಜ್ಞಾನ, ತಂತ್ರಜ್ಞಾನ, ಸಾಮಾಜಿಕ, ರಾಜಕೀಯ, ಧಾರ್ಮಿಕ ಮತ್ತಿತರ ವಿಷಯಕ್ಕೆ ಸಂಬAಧಿಸಿದ ವಿವಿಧ ಭಾಷೆಗಳ ಪುಸ್ತಕಗಳ ಭಂಡಾರವೇ ಗ್ರಂಥಾಲಯದಲ್ಲಿರುತ್ತದೆ ಎಂದರು. ಗ್ರಂಥಾಲಯದ ಮೇಲ್ವಿಚಾರಕಿ ಎಸ್.ಪಿ. ದಿವ್ಯಾ ಅವರು ಕ್ರಿಯಾಶೀಲ ಚಟುವಟಿಕೆಗಳ ಮೂಲಕ ರಾಜ್ಯ ಪ್ರಶಸ್ತಿ ಪುರಸ್ಕೃತರಾಗಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಶ್ಲಾಘಿಸಿದರು.
ಕ.ಸಾ.ಪ. ಶನಿವಾರಸಂತೆ ಹೋಬಳಿ ಘಟಕದ ಅಧ್ಯಕ್ಷ ಬಿ.ಬಿ. ನಾಗರಾಜ್ ಮಾತನಾಡಿ, ಪತ್ರಿಕೆಗಳನ್ನು ಓದುವುದರಿಂದ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯೊಂದಿಗೆ ಉತ್ತಮ ಲೇಖನಗಳು, ಸಾಮಾಜಿಕ ವರ್ತಮಾನಗಳು ಲಭ್ಯವಾಗುತ್ತದೆ ಎಂದರು. ಗ್ರಾಮ ಪಂಚಾಯಿತಿ ಸದಸ್ಯೆ ಎಸ್.ಪಿ. ಭಾಗ್ಯ ಮಾತನಾಡಿ, ದುಂಡಳ್ಳಿ ಗ್ರಂಥಾಲಯ ಚಿಕ್ಕ ಕೊಠಡಿಯಲ್ಲಿ ನಡೆಯುತ್ತಿದ್ದು, ಓದುಗರ ದೃಷ್ಟಿಯಿಂದ ಕೊಠಡಿ ವಿಸ್ತರಣೆಯಾಗಬೇಕಿದೆ ಪಂಚಾಯಿತಿ ಈ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದರು. ಗ್ರಂಥಾಲಯ ಸಲಹಾ ಸಮಿತಿ ಸದಸ್ಯ ಪ್ರಕಾಶ್ಚಂದ್ರ ಮಾತನಾಡಿದರು. ಗ್ರಂಥಾಲಯ ಮೇಲ್ವಿಚಾರಕಿ ಎಸ್.ಪಿ. ದಿವ್ಯಾ ಪ್ರಾಸ್ತಾವಿಕ ನುಡಿಗಳನ್ನಾಡಿ, ದಿನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಬಾಲಕಿಯರ ವಸತಿ ನಿಲಯದ ಸಿಬ್ಬಂದಿ ಜಲಜಾಕ್ಷಿ, ಅಂಗನವಾಡಿ ಶಿಕ್ಷಕಿ ಅಶ್ವಿನಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಶ್ರೀದೇವಿ, ಭಾರತಿ, ವೀಣಾ, ಪೂರ್ಣಿಮಾ, ವಿದ್ಯಾರ್ಥಿನಿಯರು ಹಾಗೂ ಗ್ರಂಥಾಲಯ ಸಲಹಾ ಸಮಿತಿ ಸದಸ್ಯರು ಹಾಜರಿದ್ದರು. ದಿವ್ಯಾ ಸ್ವಾಗತಿಸಿ, ವಂದಿಸಿದರು.
ವೀರಾಜಪೇಟೆ ಕಾವೇರಿ ಕಾಲೇಜು
ವೀರಾಜಪೇಟೆ, ಆ. ೧೫: ವ್ಯಕ್ತಿತ್ವ ವಿಕಸನ ಹಾಗೂ ಆಳವಾದ ಜ್ಞಾನಾರ್ಜನೆಯಲ್ಲಿ ಗ್ರಂಥಾಲಯಗಳ ಪಾತ್ರ ಅಪಾರ ಎಂದು ವೀರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್. ಸಲ್ದಾನ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾದ ಭಾರತದ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ೧೩೩ ನೇ ಜನ್ಮ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು ಗ್ರಂಥಾಲಯಗಳು ಜ್ಞಾನಾರ್ಜನೆಯ ಪ್ರಮುಖ ತಾಣವಾಗಿದ್ದು, ಸಮಾಜದ ಪ್ರಗತಿಗೆ ಹಾಗೂ ಪ್ರತಿ ಓದುಗರ ಬೆಳವಣಿಗೆಗೆ ಗ್ರಂಥಾಲಯ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದರು. ಗ್ರಂಥಾಲಯದ ಸದ್ಬಳಕೆ ಮಾಡಿ ಉತ್ತಮ ಜ್ಞಾನ ಪಡೆಯಬೇಕಿದೆ. ಪ್ರತಿಯೊಬ್ಬರು ದಿನದಲ್ಲಿ ಒಂದಷ್ಟು ಸಮಯವನ್ನು ವೃತ್ತಪತ್ರಿಕೆ ಹಾಗೂ ಪುಸ್ತಕವನ್ನು ಓದಲು ಮುಡಿಪಿಡಬೇಕೆಂದರು. ಗ್ರಂಥಾಲಯದ ಸದ್ಬಳಕೆ ಮಾಡಿ ಉತ್ತಮ ಜ್ಞಾನ ಪಡೆಯಬೇಕಿದೆ. ಕಾಲೇಜಿನ ಗ್ರಂಥಪಾಲಕಿ ಡಾ. ಮುತ್ತಮ್ಮ ಮಾತನಾಡಿ, ಗ್ರಂಥಾಲಯ ವಿಜ್ಞಾನವನ್ನು ಭಾರತದಾದ್ಯಂತ ಬೆಳೆಸುವಲ್ಲಿ, ಪ್ರಚಾರ ಮಾಡುವಲ್ಲಿ ಮೊದಲಿಗರು ಡಾ. ಎಸ್.ಆರ್. ರಂಗನಾಥನ್. ಅವರಷ್ಟು ಗ್ರಂಥಾಲಯದಲ್ಲಿ ಕೃಷಿ ಮಾಡಿದವರು ಮತ್ತೊಬ್ಬರಿಲ್ಲ. ಆದುದರಿಂದ ಅವರನ್ನು ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಕರೆಯಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲೂ ನಾವಿಂದು ಆಧುನಿಕ ಶೈಲಿಯ ಗ್ರಂಥಾಲಯಗಳನ್ನು ಕಾಣುತ್ತಿದ್ದೇವೆಂದರೆ ಅದಕ್ಕೆ ಮೂಲಕಾರಣ ಇವರೇ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದ ಹೆಚ್ಚು ಸಮಯವನ್ನು ಗ್ರಂಥಾಲಯದಲ್ಲಿ ಪುಸ್ತಕಗಳೊಂದಿಗೆ ಕಳೆದರೆ ಮುಂದಿನ ಅವರ ಜೀವನ ಹೆಚ್ಚು ಜ್ಞಾನಮಯ ವಾಗಲು ಸಾಧ್ಯವಾಗುತ್ತದೆ ಎಂದರು.
ಅAತಿಮ ಬಿ.ಎ. ವಿದ್ಯಾರ್ಥಿನಿ ಎಂ.ಪಿ. ರಾಧಿಕ, ಡಾ. ಎಸ್.ಆರ್. ರಂಗನಾಥನ್ ಅವರ ಜೀವನ ಮತ್ತು ಸಾಧನೆ ಕುರಿತು ವಿಚಾರ ಮಂಡಿ ಸಿದರು. ವಿದ್ಯಾರ್ಥಿಗಳಿಗೆ ಓದುವ ಹವ್ಯಾಸದ ಮೇಲೆ ಡಿಜಿಟಲ್ ಮಾಧ್ಯಮದ ಪ್ರಭಾವ ಎಂಬ ವಿಷಯದ ಮೇಲೆ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಕನ್ನಡ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಬಿ.ಎಸ್. ರಕ್ಷಿತಾ ಹಾಗೂ ಇಂಗ್ಲೀಷ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಆದಿತ್ಯ ಇವರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕಿ ಪ್ರಿಯ ಮುದ್ದಪ್ಪ ಉಪನ್ಯಾಸಕರಾದ ಡಾ. ವೀಣಾ, ಅಂಬಿಕ, ನಾಗರಾಜು, ನಿರ್ಮಿತ, ಅಕ್ಷಿತಾ ನಾಯ್ಕ್ ಮತ್ತಿತರರಿದ್ದರು.
ಗೋಣಿಕೊಪ್ಪಲು ಕಾವೇರಿ ಕಾಲೇಜು
ಪೊನ್ನಂಪೇಟೆ, ಆ. ೧೫: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ರಾಷ್ಟಿçÃಯ ಗ್ರಂಥಾಲಯ ದಿನ ಆಚರಿಸಲಾಯಿತು. ಈ ಸಂದರ್ಭ ಗ್ರಂಥಪಾಲಕಿ ಟಿ.ಕೆ. ಲತಾ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಭಾರತೀಯ ಗ್ರಂಥಾಲಯ ವಿಜ್ಞಾನಕ್ಕೆ ಬಹುದೊಡ್ಡ ಕೊಡುಗೆ ನೀಡುವುದರ ಜೊತೆಗೆ, ಗ್ರಂಥಾಲಯಕ್ಕೆ ವೈಜ್ಞಾನಿಕ ಸ್ವರೂಪ ನೀಡಿದವರು ಡಾ. ಎಸ್.ಆರ್. ರಂಗನಾಥನ್ ಅವರು ಅವರ ಜನ್ಮ ದಿನವಾದ ತಾ. ೧೨ ರಂದು ಗ್ರಂಥಾಲಯ ದಿನ ಆಚರಿಸುವ ಮೂಲಕ ರಂಗನಾಥ್ ಅವರಿಗೆ ಗೌರವ ಸಲ್ಲಿಸಲಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಉತ್ತಮ ಪುಸ್ತಕಗಳು ಒಳ್ಳೆಯ ಗೆಳೆಯರಿದ್ದಂತೆ ಎಂದರು. ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಮಾತನಾಡಿ, ಇಂದಿನ ಡಿಜಿಟಲ್ ಯುಗದಲ್ಲೂ ಕೂಡ ಪುಸ್ತಕಗಳು ತನ್ನದೇ ಆದ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿವೆ. ಮನುಷ್ಯನ ಸರ್ವತೋಮುಖ ಬೆಳವಣಿಗೆಯಲ್ಲಿ ಪುಸ್ತಕಗಳು ಮಹತ್ವದ ಪಾತ್ರ ನಿರ್ವಹಿಸುತ್ತವೆ ಎಂದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಬ್ರೆöÊಟ ಕುಮಾರ್, ಎನ್.ಸಿ.ಸಿ. ಅಧಿಕಾರಿ ಡಾ. ಲೆಫ್ಟಿನೆಂಟ್ ಎಂ.ಆರ್. ಅಕ್ರಂ, ಗ್ರಂಥಾಲಯ ಸಿಬ್ಬಂದಿಗಳಾದ ಅನುರಾಧ, ಚೈತ್ರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.