ಕೊಡ್ಲಿಪೇಟೆ, ಆ. ೧೫: ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೆಂಬಳೂರು, ಕ್ಯಾತೆ ಮತ್ತು ಬ್ಯಾಡಗೊಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸಲಾಯಿತು.
ವಾಲಿಬಾಲ್, ಥ್ರೋಬಾಲ್, ಬ್ಯಾಡ್ಮಿಂಟನ್ ಸೆಟ್, ಚೆಸ್, ಕೇರಂ ಬೋರ್ಡ್ ಸೇರಿದಂತೆ ಇತರೆ ಅವಶ್ಯಕ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ಗ್ರಾ.ಪಂ. ಅಧ್ಯಕ್ಷೆ ಪಾವನ ಗಗನ್, ಶಾಲೆಗಳ ಬೇಡಿಕೆಯನುಸಾರ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲೆಂದು ಕ್ರೀಡಾಪರಿಕರ ವಿತರಿಸಲಾಗಿದೆ ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಕ್ರೀಡೆಯಲ್ಲೂ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭ ಉಪಾಧ್ಯಕ್ಷೆ ದಾಕ್ಷಾಯಿಣಿ, ಸದಸ್ಯರುಗಳಾದ ಮೋಕ್ಷಿಕ್ ರಾಜ್, ರೇಣುಕಾ ಮೇದಪ್ಪ, ಲೀನಾ ಪರಮೇಶ್, ಹನೀಫ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಿರೀಶ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.