ಮಡಿಕೇರಿ, ಆ. ೧೫: ಮಡಿಕೇರಿ ತಾಲೂಕು ಸವಿತಾ ಸಮಾಜ ವತಿಯಿಂದ ಸವಿತಾ ಸಮಾಜ ಬಾಂಧವರಿಗೆ ಕೆಸರುಗದ್ದೆ ಕ್ರೀಡಾಕೂಟವನ್ನು ತಾ. ೧೭ ರಂದು ಕಡಗದಾಳುವಿನ ಮಾಳಿಗೆರ ಕುಟುಂಬಸ್ಥರ ಗದ್ದೆಯಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ೯ ಗಂಟೆಯಿAದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.