ಸೋಮವಾರಪೇಟೆ, ಆ. ೨೬: ತಾಲೂಕಿನ ಬೆಟ್ಟದಳ್ಳಿ ಶ್ರೀ ಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಯ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಪ್ರಕರಣದಲ್ಲಿ ಈಗಾಗಲೇ ಪರಸ್ಪರ ದೂರು ದಾಖಲಾಗಿದ್ದು, ಈ ದೂರಿಗೆ ಸಂಬAಧಿಸಿದAತೆ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಶುಶ್ರೂಷಕಿಯೋರ್ವರನ್ನು ತಕ್ಷಣ ವರ್ಗಾವಣೆಗೊಳಿಸದಿದ್ದರೆ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಪ್ರಮುಖರು ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಬೆಟ್ಟದಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಸಂಪತ್, ಗ್ರಾಮಸ್ಥರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಸದಸ್ಯರುಗಳು ಕುಮಾರಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಜಾಗಕ್ಕೆ ಬೇಲಿ ನಿರ್ಮಿಸುತ್ತಿದ್ದ ಸಂದರ್ಭ, ಜಾಗ ಒತ್ತುವರಿ ಮಾಡಿಕೊಂಡಿರುವ ಸ್ಥಳೀಯ ವ್ಯಕ್ತಿಯೋರ್ವರು ತಡೆಯೊಡ್ಡಿದ ಪರಿಣಾಮ ವಾಗ್ವಾದ ನಡೆದಿತ್ತು. ತದನಂತರ ಎರಡು ಕಡೆಯವರಿಂದ ಪೊಲೀಸ್ ದೂರು ದಾಖಲಾಗಿದೆ ಎಂದರು.

ಹಲವಾರು ವರ್ಷಗಳಿಂದ ಗ್ರಾಮಸ್ಥರು, ಹಿರಿಯರು ಈ ಜಾಗವನ್ನು ಶಾಲೆಗೆಂದು ಮೀಸಲಿಟ್ಟುಕೊಂಡು ಬಂದಿದ್ದಾರೆ. ಇದೀಗ ಶಾಲೆಗೆ ಸೇರಿದ ಜಾಗವನ್ನು ಈ ಕುಟುಂಬ ಒತ್ತುವರಿ ಮಾಡಿಕೊಂಡಿದೆ. ಹಿಂದಿನಿAದಲೂ ಒತ್ತುವರಿ ವಿಚಾರವಾಗಿ ದಂಪತಿ ವಾಗ್ವಾದ ನಡೆಸಿಕೊಂಡು ಬರುತ್ತಿದ್ದಾರೆ. ಈ ಕುಟುಂಬದ ಮಹಿಳೆಯು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ತಾ. ೩೧ ರ ಒಳಗೆ ವರ್ಗಾವಣೆಗೊಳಿಸದಿದ್ದರೆ ತಾಲ್ಲೂಕು ಕಚೇರಿ ಎದುರು ಬೆಟ್ಟದಳ್ಳಿ ಗ್ರಾಮಸ್ಥರು ಹಾಗು ಶಾಲಾ ಆಡಳಿತ ಮಂಡಳಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಎನ್. ರವೀಂದ್ರ ಮಾತನಾಡಿ, ಹೋಬಳಿ ವ್ಯಾಪ್ತಿಯ ಗ್ರಾಮಸ್ಥರೇ ಸಮಿತಿ ರಚಿಸಿಕೊಂಡು ಶಾಲೆಯನ್ನು ನಡೆಸುತ್ತಿದ್ದೇವೆ. ಶಾಂತಳ್ಳಿಯAತಹ ಗ್ರಾಮೀಣ ಭಾಗದಲ್ಲಿ ಬಡ ರೈತರ ಮಕ್ಕಳಿಗೂ ಆಂಗ್ಲಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಶಾಲೆ ಕಾರ್ಯನಿರ್ವಹಿಸುತ್ತಿದೆ ಎಂದರು.

ದಾನಿಗಳು ಸೇರಿಕೊಂಡು ಸ್ಥಾಪಿಸಿರುವ ಶಾಲೆಯಲ್ಲಿ ಬೆಟ್ಟದಳ್ಳಿ, ಶಾಂತಳ್ಳಿ, ತೋಳೂರುಶೆಟ್ಟಳ್ಳಿ, ಹಾನಗಲ್ಲು ಸೇರಿದಂತೆ ಇನ್ನಿತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆಯ ಜಾಗವನ್ನು ಕುಟುಂಬವೊAದು ಒತ್ತುವರಿ ಮಾಡಿದ್ದು, ಕಂದಾಯ ಇಲಾಖೆ ಒತ್ತುವರಿ ತೆರವಿಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ವಿದ್ಯಾಸಂಸ್ಥೆಯ ಖಜಾಂಚಿ ಜಿ.ಎಚ್. ರಾಜೇಶ್, ಬೆಟ್ಟದಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಲೋಕೇಶ್, ಸದಸ್ಯ ಶಿವಕುಮಾರ್ ಇದ್ದರು.