ಕಣಿವೆ, ಆ. ೨೬ : ಕೊಡಗು ವಿಶ್ವವಿದ್ಯಾಲಯದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆ ಮುಗಿದು ಹತ್ತು ದಿನಗಳಲ್ಲಿ ಮೌಲ್ಯಮಾಪನದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅದೇ ದಿನ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಕೊಡಗು ವಿಶ್ವವಿದ್ಯಾಲಯ ಪಾತ್ರವಾಗಿದೆ. ಇದೇ ಅಗಸ್ಟ್ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವೀರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು ೨೦೦ ವಿದ್ಯಾರ್ಥಿಗಳು ಹಾಜರಾಗಿದ್ದರು.

ಮೌಲ್ಯಮಾಪನ ಪ್ರಕ್ರಿಯೆಯನ್ನು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಜಿಲ್ಲೆಯ ಮತ್ತು ಹೊರಗಿನ ಮೌಲ್ಯಮಾಪಕರು ನಿರ್ವಹಿಸಿದ್ದಾರೆ.

ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬAಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿ.ಎಡ್ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUಅಒS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ ಏUಏ.ಏಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ನೋಂದಣಿ ಸಂಖ್ಯೆ ಮೂಲಕ ನೋಡಬಹುದು. ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾAಶದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಪ್ರಕಟಿಸಿದರು.

ಈ ಸಂದರ್ಭ ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ಪ್ರೊ. ರವಿಶಂಕರ್ ಎಂ.ಎನ್. ಮತ್ತು UUಅಒS ಸಿಬ್ಬಂದಿ ಉಪಸ್ಥಿತರಿದ್ದರು.