ಮಡಿಕೇರಿ: ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವತಿಯಿಂದ ೭೯ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು.ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಮಂಡುವAಡ ಪಿ.ಮುತ್ತಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಶಾಲೆಯ ನಿಕಟಪೂರ್ವ ಅಧ್ಯಕ್ಷ ಕೇಕಡ ವಿಜು ದೇವಯ್ಯ, ಸಂಚಾಲಕರಾದ ಕನ್ನಂಡ ಕವಿತಾ ಕಾವೇರಮ್ಮ, ಆಡಳಿತಾಧಿಕಾರಿ ಮುಕ್ಕಾಟಿರ ಪೊನ್ನಮ್ಮ, ನಿರ್ದೇಶಕರಾದ ಕನ್ನಂಡ ಸಂಪತ್, ನಂದಿನೆರವAಡ ದಿನೇಶ್, ಸದಾ ಮುದ್ದಪ್ಪ, ಮೂವೆರ ಜಯರಾಂ, ನಂದಿನೆರವAಡ ರವಿ ಬಸಪ್ಪ, ಕಾಳಚಂಡ ಅಪ್ಪಣ್ಣ, ಬೊಪ್ಪಂಡ ಸರಳಾ ಕರುಂಬಯ್ಯ, ಶಾಲಾ ಪ್ರಾಂಶುಪಾಲರಾದ ಬಾಳೆಯಡ ಸವಿತಾ ಪೂವಯ್ಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

ಅಮ್ಮತ್ತಿ: ಅಮ್ಮತ್ತಿಯ ಆರ್.ಜಿ ಗ್ರೂಪ್ ಗೆಳೆಯರ ಬಳಗದ ವತಿಯಿಂದ ಸ್ವಾತಂತ್ರೊö್ಯÃತ್ಸವ ಅಂಗವಾಗಿ ತಿತಿಮತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ನೊಖ್ಯ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟ ವಿತರಿಸಲಾಯಿತು. ಹಾಗೆಯೆ ವಿದ್ಯಾರ್ಥಿಗಳಿಗೆ ಶಾಲಾ ಸಾಮಗ್ರಿಗಳ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭ ಶಾಲೆಯ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ರಾಜೇಶ್ ಅವರು ಮ್ಯಾಜಿಕ್ ಪ್ರದರ್ಶನವನ್ನು ನೀಡಿ ಗಮನ ಸೆಳೆದರು. ಆರ್.ಜಿ ಗ್ರೂಪ್ ಗೆಳೆಯರ ಬಳಗದ ಹೆರಲ್ಡ್, ಶಿವಪ್ಪ, ರವಿ, ವಿನಾಯಕ, ಬಿಪಿನ್, ರಾಜೇಶ್, ಹಾಗೂ ಶಾಲೆಯ ಶಿಕ್ಷಕರು ಪಾಲ್ಗೊಂಡಿದರು.

ಐಗೂರು: ಭಾರತವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸದೃಢವಾಗಿದ್ದು, ಹಲವರ ತ್ಯಾಗ ಬಲಿದಾನಗಳಿಂದ ದೇಶಕ್ಕೆ ಲಭಿಸಿದ ಸ್ವಾತಂತ್ರ‍್ಯವನ್ನು ಉಳಿಸಲು ಎಲ್ಲರೂ ಪಣತೊಡಬೇಕೆಂದು ಸೋಮವಾರಪೇಟೆಯ ಲಯನ್ಸ್ ಸೇವಾ ಸಂಸ್ಥೆಯ ಅಧ್ಯಕ್ಷರಾದ ರಾಮ ಶೆಟ್ಟಿ ಕರೆ ನೀಡಿದರು. ಐಗೂರಿನ ಪ.ಪೂ. ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ಲಯನ್ಸ್ ಸೇವಾ ಸಂಸ್ಥೆಯಿAದ ಸ್ವಾತಂತ್ರ‍್ಯೋತ್ಸವ ಮತ್ತು ಗಿಡ ನೆಡುವ ಕಾರ್ಯಕ್ರಮದಲ್ಲಿ ಅವರು ಈ ಸಂದೇಶ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಮುಖರಾದ ಯೋಗೇಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಲಯನ್ಸ್ ಸೇವಾ ಸಂಸ್ಥೆ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದರು. ಲಯನ್ಸ್ ಸಂಸ್ಥೆಯ ವತಿಯಿಂದ ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.

ದಾನಿಗಳಾದ ಮಲ್ಲಪ್ಪ ಅವರು ಶಾಲೆಯ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನೀಡಿದರು. ಶಿಕ್ಷಕ ಮಂಜುನಾಥ ಕಾರ್ಯಕ್ರಮ ನಿರೂಪಿಸಿ ಯಶ್ವಂತ್ ವಂದಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ರಾಮಶೆಟ್ಟಿ, ಕಾರ್ಯದರ್ಶಿ ಮಂಜುನಾಥ ಚೌಟ, ಖಜಾಂಚಿ ತೇಜಸ್ವಿ ಹಾಗೂ ಇತರರು ಭಾಗವಹಿಸಿದ್ದರು.

ಮಡಿಕೇರಿ: ಮಡಿಕೇರಿ ಕೊಡವ ಸಮಾಜದ ವತಿಯಿಂದ ೭೯ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಮಾಜದ ಅಧ್ಯಕ್ಷರಾದ ಮಂಡುವAಡ ಪಿ.ಮುತ್ತಪ್ಪ ಧ್ವಜಾರೋಹಣ ನೆರವೇರಿಸಿದರು. ದಿನಾಚರಣೆಯ ಅಂಗವಾಗಿ ಎಲ್ಲರಿಗೂ ಶುಭಕೋರಿದರು. ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷ ಕೇಕಡ ವಿಜು ದೇವಯ್ಯ, ಕಾರ್ಯದರ್ಶಿ ಕನ್ನಂಡ ಸಂಪತ್, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರುಗಳಾದ ಸದಾ ಮುದ್ದಪ್ಪ, ಮೂವೆರ ಜಯರಾಂ, ನಂದಿನೆರವAಡ ರವಿ ಬಸಪ್ಪ, ಕಾಳಚಂಡ ಅಪ್ಪಣ್ಣ, ಬೊಪ್ಪಂಡ ಸರಳಾ ಕರುಂಬಯ್ಯ, ಕನ್ನಂಡ ಕವಿತಾ ಕಾವೇರಮ್ಮ, ಕೊಡವ ವಿದ್ಯಾನಿಧಿಯ ವ್ಯವಸ್ಥಾಪಕ ಮೇದುರ ಕಾವೇರಪ್ಪ, ಕೊಡವ ಸಮಾಜದ ಬೋಜಮ್ಮ ಸಿಬ್ಬಂದಿ ವರ್ಗ ಹಾಜರಿದ್ದರು

ಪೊನ್ನಂಪೇಟೆ: ಇಲ್ಲಿನ ದತ್ತ ಬಡಾವಣೆಯ ನಿವಾಸಿಗಳಿಂದ ೭೯ನೇ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲಾಯಿತು. ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯೆ ಕೋಳೇರ ಭಾರತಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ, ದತ್ತ ಬಡಾವಣೆ ನಿವಾಸಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭ ದತ್ತ ಬಡಾವಣೆಯ ಮಾಜಿ ಸೈನಿಕರಾದ ದೇಯಂಡ ಗಣೇಶ್ ಕಾರ್ಯಪ್ಪ, ಅರಮಣಮಾಡ ಬೇಬಿ ಅಯ್ಯಪ್ಪ ಹಾಗೂ ಮುಕ್ಕಾಟೀರ ಡಾನ್ ಮುದ್ದಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ದತ್ತ ಬಡಾವಣೆಯ ನಿವಾಸಿಗಳಾದ ಕೊಲ್ಲೀರ ಬೋಜು ಮಂದಣ್ಣ , ಗುಡ್ಡಮಾಡ ಕಟ್ಟಿ ಕುಟ್ಟಪ್ಪ , ಕೇಳಪಂಡ ರಾಜ ಮೊಣ್ಣಪ್ಪ , ಮತ್ರoಡ ದಿಲ್ಲು , ಮಲ್ಲಂಡ ಮೋಹನ್, ಚೆಟ್ಟಿಮಾಡ ಸಜನ್ ಕುಟ್ಟಪ್ಪ , ಅಜ್ಜಿಕುಟ್ಟೀರ ರಘು ನಂಜಪ್ಪ, ಟಿ.ವಿಜಯ್ ಹಾಗೂ ಬಡವಣೆಯ ಮಹಿಳೆಯರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಾಪೋಕ್ಲು: ಇಲ್ಲಿನ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವತಿಯಿಂದ ಸ್ವಾತಂತ್ರೊö್ಯÃತ್ಸವ ಪ್ರಯುಕ್ತ ಸ್ಕೌಟ್ಸ್ ಗೈಡ್ಸ್, ಎನ್.ಸಿ.ಸಿ ವಿದ್ಯಾರ್ಥಿಗಳಿಂದ ಧ್ವಜವಂದನೆ ನಡೆಸಲಾಯಿತು.

ವಿದ್ಯಾಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಧ್ವಜಾರೋಹಣ ಮಾಡಿದ ಬಳಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಭಾಷಣ, ದೇಶಭಕ್ತಿ ಗೀತೆ, ಸಮೂಹ ಗಾಯನ, ಛದ್ಮವೇಷ ಸ್ಪರ್ಧೆಗಳು ನಡೆದವು. ವಿಜೇತರಾದವರಿಗೆ ವೇದಿಕೆಯಲ್ಲಿದ್ದ ಗಣ್ಯರು ಬಹುಮಾನವನ್ನು ವಿತರಿಸಿದರು. ಈ ಸಂದರ್ಭ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ನೆರವಂಡ ಸುನಿಲ್ ದೇವಯ್ಯ, ನಿರ್ದೇಶಕರಾದ ಪ್ರೊ.ಕಲ್ಯಾಟಂಡ ಪೂಣಚ್ಚ, ಪ್ರಾಂಶುಪಾಲರಾದ ಶಾರದ ಬಿ.ಎಂ ಅವರುಗಳು ದಿನದ ಮಹತ್ವದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಬಿದ್ದಾಟಂಡ ಮುದ್ದಯ್ಯ, ಅಪ್ಪಚ್ಚೆಟ್ಟೋಳಂಡ ನವೀನ್ ಅಪ್ಪಯ್ಯ, ಬೊಳ್ಳಚೆಟ್ಟೀರ ಸುರೇಶ್, ಎನ್.ಸಿ.ಸಿ ಸಂಚಾಲಕ ಕೇಟೋಳಿರ ಡಾಲಿ ಅಚ್ಚಪ್ಪ, ವಿದ್ಯಾರ್ಥಿ ನಾಯಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಮಡಿಕೇರಿ: ಮೇಕೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಶಾಲೆಯ ವತಿಯಿಂದ ೭೯ನೇ ಸ್ವಾತಂತ್ರ‍್ಯ ದಿನಾಚರಣೆ ಆಚರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಸರಾದ ರಮ್ಯಾ ಹಾಗೂ ರೋಟರಿ ಅಧ್ಯಕ್ಸರಾದ ರತ್ನಾಕರ ರೈ ಅವರು ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ರಾಷ್ಟ್ರಗೀತೆ, ಧ್ವಜಗೀತೆ ಹಾಡಿದರು ಹಾಗು ಸಂವಿಧಾನ ಪೀಠಿಕೆ ಹೇಳಿದರು.

ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ವಹಿಸಿ, ಮಕ್ಕಳಿಗೆ ಶಿಷ್ಟು-ಸ್ವಚ್ಛತೆ ಹಾಗೂ ಭವಿಷ್ಯದಲ್ಲಿ ಹೇಗೆ ಬೆಳೆಯಬೇಕೆಂಬುದರ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ವೇದಿಕೆಯಲ್ಲಿ ಮಾಜಿ ಸೈನಿಕ ಚೋಂಡಿರ ಸುರೆಶ್, ರೋಟರಿ ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಕಾರಿಯಪ್ಪ. ಚೇತನ್, ರೋಟರಿ ಮಿಸ್ಟಿ ಹಿಲ್ಸ್ ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷೆ ರಮ್ಯಾ, ಉಮೇಶ್, ರಫೀಕ್, ಸುಶೀಲಾ, ಮಧು ಉಪಸ್ಥಿತರಿದ್ದರು.

ಮಕ್ಕಳಿಗೆ ಜಾದೂಗಾರರಾದ ವಿಕ್ರಮ್ ಜಾದುಗಾರ ಜಾದೂ ಪ್ರದರ್ಶನ ನೀಡಿ ಮನರಂಜಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಬಿತಾ ಅವರು ಸ್ವಾಗತಿಸಿದರು, ಶ್ರೀಲತಾ ವಂದಿಸಿದರು, ವೀಣಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಪೊನ್ನಂಪೇಟೆ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ೭೯ನೇ ಸ್ವಾತಂತ್ರ‍್ಯ ದಿನಾಚರಣೆ ಆಚರಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಜುನೈದ್ ಸಿ.ಎ ಧ್ವಜಾರೋಹಣ ನೆರವೇರಿಸಿದರು.

ನಂತರ ವಿದ್ಯಾರ್ಥಿಗಳು ಬಸವೇಶ್ವರ ದೇವಸ್ಥಾನದವರೆಗೆ ರಾಷ್ಟ್ರ ಧ್ವಜವನ್ನು ಹಿಡಿದು, ದೇಶಭಕ್ತಿ ಸಾರುವ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಪ್ರತಿ ತರಗತಿ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬಂದವು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಟಿ.ಎಲ್ ಶ್ರೀನಿವಾಸ್, ಮುಖ್ಯ ಶಿಕ್ಷಕ ವಿಜಯ್ ಬಿ.ಎಂ, ಪಟ್ಟಣ ಪಂಚಾಯಿತಿ ಸದಸ್ಯ ರಾಮಕೃಷ್ಣ, ಹಿರಿಯ ನಾಗರಿಕ ವೇದಿಕೆ ಸದಸ್ಯ ದಿನೇಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಾಜಿ ಅಚ್ಯುತನ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ನಾಗವೇಣಿ, ಎಸ್.ಡಿ.ಎಂ.ಸಿ ಸದಸ್ಯರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ಅತಿಥಿ ಶಿಕ್ಷಕರು, ಸಹಾಯಕಿಯರು, ಅಡಿಗೆ ಸಿಬ್ಬಂದಿ ಇದ್ದರು.

ಪೊನ್ನಂಪೇಟೆ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ೭೯ನೇ ಸ್ವಾತಂತ್ರ‍್ಯ ದಿನಾಚರಣೆ ಆಚರಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಜುನೈದ್ ಸಿ.ಎ ಧ್ವಜಾರೋಹಣ ನೆರವೇರಿಸಿದರು.

ನಂತರ ವಿದ್ಯಾರ್ಥಿಗಳು ಬಸವೇಶ್ವರ ದೇವಸ್ಥಾನದವರೆಗೆ ರಾಷ್ಟ್ರ ಧ್ವಜವನ್ನು ಹಿಡಿದು, ದೇಶಭಕ್ತಿ ಸಾರುವ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಪ್ರತಿ ತರಗತಿ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬಂದವು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಟಿ.ಎಲ್ ಶ್ರೀನಿವಾಸ್, ಮುಖ್ಯ ಶಿಕ್ಷಕ ವಿಜಯ್ ಬಿ.ಎಂ, ಪಟ್ಟಣ ಪಂಚಾಯಿತಿ ಸದಸ್ಯ ರಾಮಕೃಷ್ಣ, ಹಿರಿಯ ನಾಗರಿಕ ವೇದಿಕೆ ಸದಸ್ಯ ದಿನೇಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಾಜಿ ಅಚ್ಯುತನ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ನಾಗವೇಣಿ, ಎಸ್.ಡಿ.ಎಂ.ಸಿ ಸದಸ್ಯರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ಅತಿಥಿ ಶಿಕ್ಷಕರು, ಸಹಾಯಕಿಯರು, ಅಡಿಗೆ ಸಿಬ್ಬಂದಿ ಇದ್ದರು.

ಗುಡ್ಡೆಹೊಸೂರು: ಗುಡ್ಡೆಹೊಸೂರಿನ ಶ್ರೀ ಕಾವೇರಿ ಆಟೋ ನಿಲ್ದಾಣದಲ್ಲಿ ಅಟೋ ಮಾಲಿಕರು ಮತ್ತು ಚಾಲಕರು ಸೇರಿ ಸ್ವಾತಂತ್ರೊö್ಯÃತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

ಚೆಯ್ಯಂಡಾಣೆ: ಕಕ್ಕಬ್ಬೆ ಕುಂಜಿಲ ಗ್ರಾಮದ ಕೆ.ಪಿ.ಬಾಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೯ನೇ ಸ್ವಾತಂತ್ರ‍್ಯ ದಿನವನ್ನು ಆಚರಿಸ ಲಾಯಿತು. ಶಾಲೆಯ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಹಾಗೂ ಪಂಚಾಯಿತಿ ಸದಸ್ಯರಾದ ಸಫಿಯಾ ಅವರು ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿದರು. ಬಳಿಕ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಫಿಯಾ ಅವರು ಪ್ರಸ್ತಾವಿಕವಾಗಿ ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಶಾಲೆಯ ನಿವೃತ್ತ ಶಿಕ್ಷಕಿ ರೇಖಾ ಕುಮಾರಿ, ಪ್ರಬಾರ ಮುಖ್ಯ ಶಿಕ್ಷಕಿ ಸವಿತಾ, ಶಿಕ್ಷಕ ಗಣೇಶ್, ಎಸ್ ಡಿಎಂಸಿ ಸದಸ್ಯ ಇಸ್ಮಾಯಿಲ್ ದಿನದ ಮಹತ್ವದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಭಾಷಣ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಅಬ್ದುಲ್ ಹಫೀಲ್, ಶಾಲೆಯ ಎಸ್‌ಡಿಎಂಸಿ ಸದಸ್ಯರು, ಶಾಲೆಯ ಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸವಿತಾ ಸ್ವಾಗತಿಸಿ, ಶಿಕ್ಷಕಿ ಪವಿತ್ರ ವಂದಿಸಿದರು. ವೀರಾಜಪೇಟೆ: ವೀರಾಜಪೇಟೆಯ ಹೊರವಲಯದ ಹೆಗ್ಗಳ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೯ನೇ ಸ್ವಾತಂತ್ರೊö್ಯÃತ್ಸವವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ, ಕಾಫಿ ಬೆಳೆಗಾರರಾದ ಕೋಡಿರ ಟಿ. ಗಣಪ ಹಾಗೂ ಎಸ್.ಡಿಎಂ.ಸಿ ಅಧ್ಯಕ್ಷರಾದ ಶೀಲಾ ಅವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕಿ ಡಿ. ಎ ಕಮರುನ್ನಿಸ, ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರುಗಳು, ಶಾಲೆಯ ಸಿಬ್ಬಂದಿಗಳು, ಸ್ಥಳೀಯರು, ಹಾಗೂ ಪೋಷಕರು ಹಾಜರಿದ್ದರು. ಸ್ವಾತಂತ್ರೋತ್ಸವ ಅಂಗವಾಗಿ ಪುಟಾಣಿ ಮಕ್ಕಳಿಂದ ಸಾಂಸ್ಕöÈತಿಕ ಕಾರ್ಯಕ್ರಮ ನಡೆಯಿತು.

ಚೆಟ್ಟಿಮಾನಿ: ಚೆಟ್ಟಿಮಾನಿ ಸಾಂದೀಪನ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರೊö್ಯÃತ್ಸವ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಲಾ ಸಮಿತಿ ಕಾರ್ಯದರ್ಶಿ ಯೋಗೇಶ್ ಕೆ.ಆರ್ ಅವರು ಸ್ವಾತಂತ್ರö್ಯಕ್ಕೆ ಹೋರಾಡಿದ ನಾಯಕರಂತೆ ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಗುರಿಯನ್ನು ಮುಂದಿಟ್ಟುಕೊAಡು ಸಾಧನೆ ಮಾಡಬೇಕೆಂದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮುಖ್ಯ ಶಿಕ್ಷಕಿ ಸೌಜನ್ಯ ಗಣೇಶ್ ಅವರು ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಶಿಕ್ಷಕಿ ಪೂಜಾಶ್ರೀ ನಿರೂಪಿಸಿದರು.ವೀರಾಜಪೇಟೆ: ವೀರಾಜಪೇಟೆ ಸಮೀಪದ ಬಿಟ್ಟಂಗಾಲದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೯ನೇ ಸ್ವಾತಂತ್ರೊö್ಯÃತ್ಸವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡವ ರಿಕ್ರಿಯೇಷನ್ ಕ್ಲಬ್‌ನ ಅಧ್ಯಕ್ಷ ಧರ್ಮಜ ದೇವಯ್ಯ, ಉಪಾಧ್ಯಕ್ಷ ನಟೇಶ್, ನಾಪಂಡ ಕಿರಣ್ ಹಾಗೂ ಪೊನ್ನಕಚ್ಚಿರ ಸುಭಾಶ್ ಹಾಜರಿದ್ದರು. ಈ ಸಮದರ್ಭ ತಮ್ಮ ಕ್ಲಬ್‌ನ ವತಿಯಿಂದ ಶಾಲೆಗೆ ಗೋಡೆ ಬರಹ ಬರೆಸುವ ಸಲುವಾಗಿ ಐದು ಸಾವಿರ ರೂಪಾಯಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ಪುಷ್ಪ, ಅತಿಥಿ ಶಿಕ್ಷಕಿ ಚಿತ್ರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವೀರಾಜಪೇಟೆ: ವೀರಾಜಪೇಟೆ ಸಮೀಪದ ಬಿಟ್ಟಂಗಾಲದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೯ನೇ ಸ್ವಾತಂತ್ರೊö್ಯÃತ್ಸವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡವ ರಿಕ್ರಿಯೇಷನ್ ಕ್ಲಬ್‌ನ ಅಧ್ಯಕ್ಷ ಧರ್ಮಜ ದೇವಯ್ಯ, ಉಪಾಧ್ಯಕ್ಷ ನಟೇಶ್, ನಾಪಂಡ ಕಿರಣ್ ಹಾಗೂ ಪೊನ್ನಕಚ್ಚಿರ ಸುಭಾಶ್ ಹಾಜರಿದ್ದರು. ಈ ಸಮದರ್ಭ ತಮ್ಮ ಕ್ಲಬ್‌ನ ವತಿಯಿಂದ ಶಾಲೆಗೆ ಗೋಡೆ ಬರಹ ಬರೆಸುವ ಸಲುವಾಗಿ ಐದು ಸಾವಿರ ರೂಪಾಯಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ಪುಷ್ಪ, ಅತಿಥಿ ಶಿಕ್ಷಕಿ ಚಿತ್ರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕೂಡಿಗೆ : ಕುಶಾಲನಗರ ತಾಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಎನ್.ಎಸ್.ಎಸ್., ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ವಿದ್ಯಾರ್ಥಿ ಸಂಘ ಹಾಗೂ ಎಸ್ ಡಿ ಎಂ ಸಿ ಸಹಯೋಗದಲ್ಲಿ ೭೯ ನೇ ಸ್ವಾತಂತ್ರೊö್ಯÃತ್ಸವವನ್ನು ಆಚರಿಸಲಾಯಿತು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕೆ.ಕೆ. ಹರೀಶ್ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ‍್ಯ ದಿನಾಚರಣೆಯ ಮಹತ್ವ ಕುರಿತು ಮುಖ್ಯ ಭಾಷಣ ಮಾಡಿದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ. ಟಿ. ಸೋಮಶೇಖರ್ ವಿದ್ಯಾರ್ಥಿಗಳು ದೇಶದ ಸ್ವಾತಂತ್ರ‍್ಯದ ಇತಿಹಾಸ ಹಾಗೂ ಸ್ವಾತಂತ್ರ‍್ಯ ವೀರರ ಹೋರಾಟ, ಅವರ ತ್ಯಾಗ, ಬಲಿದಾನ ಹಾಗೂ ಸೇವೆಯನ್ನು ಸ್ಮರಿಸುವುದರೊಂದಿಗೆ ಅವರ ಆದರ್ಶಗಳನ್ನು ಪರಿಪಾಲಿಸುವ ಮೂಲಕ ದೇಶದ ಐಕ್ಯತೆಯನ್ನು ಸಾರಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸ್ವಾತಂತ್ರ‍್ಯ ಗಳಿಸಲು ಶ್ರಮಿಸಿದ ವೀರರ ಧೈರ್ಯ, ತ್ಯಾಗಗಳನ್ನು ಸ್ಮರಿಸೋಣ, ಗೌರವಿಸೋಣ. ರಾಷ್ಟ್ರದ ಐಕ್ಯತೆ, ಸಮಗ್ರತೆಗೆ ಒಗ್ಗಟ್ಟಿನಿಂದ ಶ್ರಮಿಸುವ ಮೂಲಕ ದೇಶದ ಹಿರಿಮೆ- ಗರಿಮೆಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿಯೋಣ ಎಂದರು. ಸ್ವಾತಂತ್ರ‍್ಯಗಾರರ ಹೋರಾಟ ಮತ್ತು ತ್ಯಾಗ, ಬಲಿದಾನದ ಕುರಿತು ಶಿಕ್ಷಕ ಎಂ.ಟಿ.ದಯಾನAದ ಪ್ರಕಾಶ್ ಮಾತನಾಡಿದರು. ಇದೇ ವೇಳೆ ಸೇನೆಯಿಂದ ನಿವೃತ್ತಗೊಂಡಿರುವ ನಿವೃತ್ತ ಯೋಧ ಬಿ.ಎಲ್.ವಿನೋದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗ್ರಾ.ಪಂ. ಸದಸ್ಯ ಕೆ.ಕೆ.ಭೋಗಪ್ಪ, ಮಂಡಲ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್.ರಾಜಾಚಾರಿ, ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ಗಣೇಶ್, ಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನAದ ಪ್ರಕಾಶ್, ಬಿ.ಎನ್. ಸುಜಾತ, ಬಿ.ಡಿ. ರಮ್ಯ, ಎಸ್.ಎಂ.ಗೀತಾ ಕೆ.ಟಿ.ಸೌಮ್ಯ, ಬಿ.ಎಸ್. ಅನ್ಸಿಲಾ ರೇಖಾ, ಸಿಬ್ಬಂದಿ ಎಂ.ಉಷಾ, ನಂತರ ನಡೆದ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ವಿವಿಧ ವೇಷ ಧರಿಸಿದ್ದ ಶಾಲಾ ಮಕ್ಕಳು ದೇಶ ಭಕ್ತಿಗೀತೆಗಳಿಗೆ ನೃತ್ಯ ಮಾಡಿ ರಾಷ್ಟಿçÃಯ ಭಾವೈಕ್ಯತೆ ಪ್ರದರ್ಶಿಸಿದ್ದು ಗಮನ ಸೆಳೆಯಿತು.