ವೀರಾಜಪೇಟೆ, ಆ. ೨೪: ನಾಯಕತ್ವ ಗುಣಗಳಿಂದ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಿದಾನಂದ ಕುಮಾರ್ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ವೀರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ೨೦೨೫-೨೬ ನೇ ಸಾಲಿನ ವಿದ್ಯಾರ್ಥಿ ಸಂಘದ ರಾಷ್ಟಿçÃಯ ಸೇವಾ ಯೋಜನೆ ಘಟಕ, ರೋವರ್ ಘಟಕ ಮಾದಕ ವಸ್ತು ವಿರೋದಿ ಘಟಕ ಹಾಗೂ ಮತದಾರರ ಸಾಕ್ಷರತಾ ಘಟಕಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನವು ಮನುಜ ಜೀವನದ ಅವಿಭಾಜ್ಯ ಅಂಗ ಎಂದು ಪರಿಗಣಿಸುವಂತಾಗಬೇಕು, ನಾಯಕತ್ವ ಗುಣ, ಮೌಲ್ಯಯುತವಾದ ಜೀವನ ಶೈಲಿ ಸನ್ನಡತೆಗಳಿಂದ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯವೆಂದರು. ಮುಖ್ಯ ಅತಿಥಿಗಳಾಗಿದ್ದ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ನಿವೃತ್ತ ಶಿಕ್ಷಣಧಿಕಾರಿ ಪಿ.ಎಸ್. ಮಚ್ಚಾಡೋ ಮಾತನಾಡಿ, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳಿಗೆ ಪರಿಶ್ರಮ, ಆಂತರಿಕ ಶಿಸ್ತು ಮತ್ತು ಸ್ನೇಹ ಭವಿಷ್ಯದ ಯಶಸ್ವಿಯ ಗುಟ್ಟು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸುಶಿಕ್ಷಿತ ಸಮಾಜ ರೂಪಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕಾಲೇಜಿನಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಶಿಸ್ತಿನ ಜೊತೆ ಮುನ್ನಡೆದು ಮುಂದೆ ಭವಿಷ್ಯದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳುವ ಸಂಕಲ್ಪ ಮಾಡುವಂತೆ ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಎನ್.ಕೆ. ಜ್ಯೋತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ದಮಯಂತಿ, ಅರ್ಥಶಾಸ್ತç ಉಪನ್ಯಾಸಕ ಕೆ.ಎಸ್. ತಿಮ್ಮಯ್ಯ, ರಾಜ್ಯಶಾಸ್ತç ವಿಭಾಗದ ಉಪನ್ಯಾಸಕಿ ಪವಿತ್ರ, ಗಣಿತಶಾಸ್ತç ಉಪನ್ಯಾಸಕ ಎಸ್.ಪಿ. ರೈಮಂಡ್, ಉಪನ್ಯಾಸಕಿ ಶಾಂತಿ ಉಪಸ್ಥಿತರಿದ್ದರು.
ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ವಿತರಣೆ ಮತ್ತು ವಿವಿಧ ಕಾಲೇಜು ವತಿಯಿಂದ ಆಯೋಜಿಸಿದ್ದ ವಿವಿಧ ಚಟುವಟಿಕೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.