ಕೊಡಗಿನ ಹಬ್ಬಗಳಲ್ಲಿ ಹುತ್ತರಿ ಹಬ್ಬಕ್ಕೆ ಮೊದಲ ಸ್ಥಾನ ಇದ್ದರೆ ನಂತರದ ಸ್ಥಾನ ಕೈಲ್ ಮೂಹೂರ್ತ ಹಬ್ಬಕ್ಕಿದೆ. ಕೈಲ್ ಪೊಳ್ದ್ ಎಂದರೆ ಆಯುಧ ಪೂಜೆ ಎಂಬ ಅರ್ಥ.

ನಾಲ್ಕುನಾಡು ವ್ಯಾಪ್ತಿಯಲ್ಲಿ ತಾ.೨೮ ರಂದು ಕೈಲ್ ಮುಹೂರ್ತ ಹಬ್ಬವನ್ನು ಆಚರಿಸಲಾಗುತ್ತದೆ. ಕೊಡಗಿನಲ್ಲಿ ಮಳೆಗಾಲ ಪ್ರಾರಂಭದಲ್ಲಿ ರೈತ ತನಗೆ ಸೇರಿದ ಗದ್ದೆಯನ್ನು ಉತ್ತು ಬಿತ್ತಿ ಗದ್ದೆಯನ್ನು ನಾಟಿ ಮಾಡಿ ದಣಿದ ಸಂದರ್ಭದಲ್ಲಿ ತಾನು ಸಂತೋಷದಿAದ ಈ ಹಬ್ಬವನ್ನು ವಿಜೃಂಭಣೆಯಿAದ ಆಚರಿಸುತ್ತಾನೆ. ಈ ಸಂದರ್ಭ ಗದ್ದೆ ಕೆಲಸದಲ್ಲಿ ದಣಿದ ಎತ್ತುಗಳನ್ನು ಸ್ನಾನ ಮಾಡಿಸಿ ನಂತರ ಉಳುವುದಕ್ಕೆ ಉಪಯೋಗಿಸಿದ ಆಯುಧಗಳಾದ ನೇಗಿಲು, ನೊಗಕ್ಕೆ ಪೂಜೆ ಸಲ್ಲಿಸಿ ಎತ್ತುಗಳಿಗೆ ಪಣಿ ಪುಟ್ಟು ತಿನ್ನಿಸುತ್ತಾರೆ. ನಂತರ ಮನೆಯಲ್ಲಿರುವ ಆಯುಧಗಳಾದ ಕೋವಿ, ಕತ್ತಿ, ಭರ್ಜಿಯನ್ನು ನೆಲ್ಲಕ್ಕಿ ನಡುಬಾಡೆಯಲ್ಲಿಟ್ಟು ಅದಕ್ಕೆ ಪೂಜೆ ಸಲ್ಲಿಸಿ ಹಬ್ಬದಲ್ಲಿ ಮಾಡಿದ ಖಾದ್ಯವಾದ ಕಡುಂಬಿಟ್ಟು, ಮಾಂಸ ಸಾರು, ಸಾರಾಯಿ ಮುಂತಾದವುಗಳನ್ನು ದೇವರಿಗೆ ಮೀದಿ ಇಟ್ಟು ತಾವೂ ಸೇವಿಸಿ ಸಂಭ್ರಮಿಸುತ್ತಾರೆ.

ಈ ಆಹಾರ ಪದಾರ್ಥ ಎಲ್ಲಾ ಕೊಡವ ಭಾಷಿಕರ ಹಾಗೂ ಇನ್ನಿತರ ಮನೆಯಲ್ಲೂ ಕಂಡು ಬರುತ್ತದೆ. ಈ ಸಂದರ್ಭ ನೆಂಟರಿಷ್ಟರು ಬಂದು ಈ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸುತ್ತಾರೆ. ಊರು ಊರುಗಳಲ್ಲೂ ಕೈಲ್ ಮೂಹೂರ್ತ ಹಬ್ಬದ ಪ್ರಯುಕ್ತ ಆಟೋಟ ಸ್ಪರ್ಧೆಯನ್ನು ಸಹ ಏರ್ಪಡಿಸಿ ಸಂಭ್ರಮಿಸುತ್ತಾರೆ.

ಕೈಲ್ ಮೂಹೂರ್ತ ಹಬ್ಬವನ್ನು ಒಂದೊAದು ಊರಿನಲ್ಲಿ ಬೇರೆ ಬೇರೆ ದಿನಗಳಲ್ಲಿ ಆಚರಿಸುತ್ತಾರೆ. ಗಾಳಿಬೀಡು ವಿಭಾಗದಲ್ಲಿ ಮೊದಲು ಹಬ್ಬವನ್ನು ಆಚರಿಸಲಾಗುತ್ತದೆ. ನಂತರ ನಾಲ್ಕುನಾಡಿನ ಬಹುತೇಕ ಕಡೆ ಆಗಸ್ಟ್ ತಿಂಗಳ ೨೮ ರಂದು ನಡೆಯುತ್ತದೆ. ನಂತರ ಕೊಡಗಿನಾದ್ಯಂತ ಸೆಪ್ಟೆಂಬರ್ ೩ ರಂದು ಆಚರಿಸುತ್ತಾರೆ.