ಮಡಿಕೇರಿ, ಆ. ೨೬ : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಭೆಯು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ನೇತೃತ್ವದಲ್ಲಿ ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆಯಿತು.
ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿAದ ಕಾಲೇಜಿನಲ್ಲಿ ನಡೆಯಬೇಕಿರುವ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಲಾಯಿತು ಹಾಗೂ ಗೌರವ ಅಧ್ಯಕ್ಷ ಸ್ಥಾನಕ್ಕೆ ಕಾಲೇಜಿನ ಪ್ರಾಂಶುಪಾಲರನ್ನು ನೇಮಿಸಲು ನಿರ್ಣಯ ಕೈಗೊಳ್ಳಲಾಯಿತು.
ಗೌರವ ಅಧ್ಯಕ್ಷರು ಹಾಗೂ ಕಾಲೇಜು ಪ್ರಾಂಶುಪಾಲ ಮೇ.ಪ್ರೊ.ರಾಘವ.ಬಿ. ಮಾತನಾಡಿ ಕಾಲೇಜು ಅಭಿವೃದ್ಧಿಗೆ ಹಳೆ ವಿದ್ಯಾರ್ಥಿ ಸಂಘದ ಸಹಕಾರ ಅಗತ್ಯ. ಕಾಲೇಜಿನಲ್ಲಿ ಸಾಕಷ್ಟು ಸಮಸ್ಯೆ ಇದ್ದು ಈ ಬಗ್ಗೆ ಹಳೆ ವಿದ್ಯಾರ್ಥಿ ಸಂಘ ಗಮನ ಹರಿಸುವಂತೆ ಮನವಿ ಮಾಡಿದರು.
ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯ¥ ಮಾತನಾಡಿ, ಹೊಸ ಆಡಳಿತ ಮಂಡಳಿ ಬಂದ ನಂತರ ಈವರೆಗೆ ನೂರಕ್ಕೂ ಹೆಚ್ಚು ಹೊಸ ಸದÀಸ್ಯತ್ವವನ್ನ ಮಾಡಿರುವುದಾಗಿ ಮಾಹಿತಿ ನೀಡಿದರು. ಮುಂದಿನ ಮಹಾಸಭೆಯ ಒಳಗಾಗಿ ಇನ್ನೂ ೫೦ ಹೊಸ ಸದಸ್ಯತ್ವವನ್ನು ಮಾಡಿ ೧೫೦ಕ್ಕೂ ಹೆಚ್ಚು ಸದಸ್ಯರನ್ನ ಸೇರಿಸುವುದಾಗಿ ಮಾಹಿತಿ ನೀಡಿದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಫೋಟೋಗ್ರಫಿ ಸ್ಪರ್ಧೆಯನ್ನು ಏರ್ಪಡಿಸುವುದಾಗಿ ತಿಳಿಸಿದರು. ಅಕ್ಟೋಬರ್ ತಿಂಗಳಲ್ಲಿ ವಾರ್ಷಿಕ ಸಭೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ನಡೆಸಿ ಈ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ಕಾಲೇಜು ಉಪನ್ಯಾಸಕರಿಗೆ ಸನ್ಮಾನ, ಕಾಲೇಜಿನ ಹಳೆ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದವರನ್ನ ಗೌರವಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ನಿರ್ದೇಶಕರುಗಳಾದ ಲೋಹಿತ್ ಮಾಗುಲು ಮನೆ, ಚೀಯಕಪೂವಂಡ ಸಚಿನ್ ಪೂವಯ್ಯ, ಐಚಂಡ ರಶ್ಮಿ ಮೇದಪ್ಪ, ಶೀತಲ್ ಪಿ.ಕೆ, ಕೋಚನ ದಿಶಾಂತ್, ಆದರ್ಶ್ ಅದ್ಕಲೇಗಾರ್, ಹರ್ಷಿತ್ ಬಿ.ಜಿ, ವತ್ಸಲ, ಖುರ್ಷಿದಾ ಭಾನು, ಚರಣ್ ಬಿ ಜೆ ಹಾಜರಿದ್ದರು