ಮಡಿಕೇರಿ, ಆ. ೨೮: ಕೂಡಿಗೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ಹಲವಾರು ಅವ್ಯವಸ್ಥೆಗಳು ಎದುರಾಗಿವೆ ಎಂಬ ಪೋಷಕರ ದೂರಿನಂತೆ ಇಂದು ಲೋಕಾಯುಕ್ತ ಅಧಿಕಾರಿಗಳು ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಹಲವು ಅವ್ಯವಸ್ಥೆಗಳು ಕಂಡು ಬಂದಿದ್ದು, ಸಂಬAಧಿಸಿದ ಪ್ರಾಂಶುಪಾಲರು ಹಾಗೂ ವಾರ್ಡನ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡರು. ಶಾಲೆಯ ಹಲವು ಶಿಕ್ಷಕರು ಅನಧಿಕೃತವಾಗಿ ಕರ್ತವ್ಯಕ್ಕೆ ಗೈರುಹಾಜರಾಗಿದ್ದರು. ಅಲ್ಲದೆ ಅಡುಗೆ ಕೊಠಡಿಯಲ್ಲಿ ಅಶುಚಿತ್ವ ಗೋಚರಿಸಿತು. ದಿನಸಿ ಪದಾರ್ಥಗಳಲ್ಲಿ ಹುಳಹುಪ್ಪಟೆಗಳು ತುಂಬಿದ್ದು ಕಂಡುಬAದಿದ್ದು ಸಂಬAಧಿಸಿದ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಲಾಯಿತು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
೪ಆರನೇ ಪುಟಕ್ಕೆ (ಮೊದಲ ಪುಟದಿಂದ) ಲೋಕಾಯುಕ್ತ ಡಿವೈಎಸ್‌ಪಿ ದಿನಕರ್ ಶೆಟ್ಟಿ, ಪೊಲೀಸ್ ನಿರೀಕ್ಷಕ ವೀಣಾ ನಾಯಕ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದರು. ಈ ವಸತಿ ಶಾಲೆಯಲ್ಲಿ ೬ನೇ ತರಗತಿಯಿಂದ ೧೦ನೇ ತರಗತಿತನಕ ಸುಮಾರು ೨೫೦ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶುಚಿತ್ವಕ್ಕೆ ಆದ್ಯತೆ, ಶುದ್ಧ ಕುಡಿಯುವ ನೀರು ಪೂರೈಕೆ, ಶಿಕ್ಷಕರ ಹಾಜರಾತಿ ಕುರಿತಾಗಿ ಸೂಕ್ತ ಕ್ರಮವಹಿಸುವಂತೆ ಈ ಸಂದರ್ಭ ಸೂಚಿಸಲಾಯಿತು.