ಮಡಿಕೇರಿ, ಆ. ೩೦: ಜಿಲ್ಲೆಯ ವಿವಿಧ ಕಡೆಗಳಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಗದಿತ ದಿನದ ಬೆಳಿಗ್ಗೆ ೬ ಗಂಟೆಯಿAದ ಮಧ್ಯರಾತ್ರಿ ೧೨ ಗಂಟೆಯ ತನಕ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾ. ೩೧ ರಂದು ನಾಪೋಕ್ಲು ಸುತ್ತಮುತ್ತಲಿನ ೧೫ ಕಿ.ಮೀ. ವ್ಯಾಪ್ತಿಯಲ್ಲಿ, ಸೆ. ೨ ರಂದು ಮೂರ್ನಾಡು ನಗರದ ಸುತ್ತಮುತ್ತಲಿನ ೮ ಕಿ.ಮೀ. ವ್ಯಾಪ್ತಿಯಲ್ಲಿ, ಸೆ. ೪ ಹಾಗೂ ೭ ರಂದು ಚೆಟ್ಟಳ್ಳಿ ಸುತ್ತಮುತ್ತಲಿನ ೨ ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸೆ. ೬ ರಂದು ಬೆಳಿಗ್ಗೆ ೬ ಗಂಟೆಯಿAದ ಸೆ. ೭ ರ ಬೆಳಿಗ್ಗೆ ೧೦ ಗಂಟೆಯವರೆಗೆ ವೀರಾಜಪೇಟೆ ನಗರ ಹಾಗೂ ಸುತ್ತಲಿನ ೧೦ ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.